ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಮಕ್ಕಳಲ್ಲಿ ಕಾನೂನು ಅರಿವು ಮೂಡಿಸಿ’

Last Updated 27 ಸೆಪ್ಟೆಂಬರ್ 2021, 2:51 IST
ಅಕ್ಷರ ಗಾತ್ರ

ಕುಕನೂರು: ‘ಶಾಲಾ ಮಕ್ಕಳು ಪ್ರಾಥಮಿಕ ಕಾನೂನು ತಿಳಿವಳಿಕೆ ಪಡೆಯಬೇಕು. ರಸ್ತೆ ಮಧ್ಯದಲ್ಲಿ ನಿಲ್ಲುವುದು, ಚಿಕ್ಕ ಮಕ್ಕಳು ಬೈಕ್ ಓಡಿಸುವುದು ಕಾನೂನಿನ ಉಲ್ಲಂಘನೆಯಾಗುತ್ತದೆ’ ಎಂದು ಮುಖ್ಯ ಶಿಕ್ಷಕ ಮುತ್ತಣ್ಣ.ಎಚ್ ಹೇಳಿದರು.

ಇಲ್ಲಿನ ಸರ್ಕಾರಿ ಪ್ರೌಢ ಶಾಲೆಯಲ್ಲಿ ಶನಿವಾರ ನಡೆದ ಕಾನೂನು ಅರಿವು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸುರಕ್ಷತೆ ಜತೆಗೆ ಸಾರ್ವಜನಿಕರಿಗೂ ತೊಂದರೆ ಯಾಗದಂತೆ ನಡೆದುಕೊಳ್ಳಬೇಕು. ಎಲ್ಲರೂ ಕಾನೂನು ಗೌರವಿಸಬೇಕು ಎಂದರು.

ಕಾನೂನು ಪ್ರತಿ ವ್ಯಕ್ತಿಯ ದೈನಂದಿನ ಜೀವನವನ್ನು ನಿಯಂತ್ರಿಸುತ್ತದೆ. ಪ್ರತಿ ಹೆಜ್ಜೆ ಹೆಜ್ಜೆಗೂ ಕಾನೂನು ಪಾಲನೆ ಮಾಡಬೇಕಾಗುತ್ತದೆ. ಕಾನೂನು ಮಾನವನ ಜೀವನದ ಅವಿಭಾಜ್ಯ ಅಂಗವಾಗಿದೆ. ಕಾರಣ ಕಾನೂನಿನ ಬಗ್ಗೆ ಎಲ್ಲರೂ ತಿಳಿದುಕೊಳ್ಳುವುದು ಅವಶ್ಯವಾಗಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT