ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಬಾಬೂಜಿ ಶೋಷಿತರ ಪಾಲಿನ ಆಶಾಕಿರಣ’

Last Updated 5 ಏಪ್ರಿಲ್ 2021, 13:55 IST
ಅಕ್ಷರ ಗಾತ್ರ

ಕನಕಗಿರಿ: ಇಲ್ಲಿನ ತಹಶೀಲ್ದಾರ್ ಕಚೇರಿ ಸೇರಿ ಪಟ್ಟಣದ ವಿವಿಧ ಸರ್ಕಾರಿ ಕಚೇರಿಗಳಲ್ಲಿ ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನರಾಂ ಅವರ 114ನೇ ಜನ್ಮ ದಿನವನ್ನು ಆಚರಿಸಲಾಯಿತು.

ಪಟ್ಟಣ ಪಂಚಾಯಿತಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಟ್ಟಣ ಪಂಚಾಯಿತಿ ಸದಸ್ಯ ಶರಣಬಸಪ್ಪ ಭತ್ತದ ಮಾತನಾಡಿ,‘ಶೋಷಿತ ವರ್ಗಗಳ ಆಶಾಕಿರಣವಾಗಿದ್ದ ಡಾ. ಬಾಬು ಜಗಜೀವನರಾಂ ಅವರು ದೇಶದ ಉಪ ಪ್ರಧಾನಮಂತ್ರಿಯಾಗಿ ಉತ್ತಮ ಕೆಲಸ ಮಾಡಿ ಹಸಿರುಕ್ರಾಂತಿಯ ಹರಿಕಾರ ಎಂದು ಹೆಸರಾಗಿದ್ದರು’ ಎಂದು ಸ್ಮರಿಸಿದರು.

ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಎಂ. ತಿರುಮಲಮ್ಮ ಮಾತನಾಡಿದರು. ಪಟ್ಟಣ ಪಂಚಾಯಿತಿ ಸದಸ್ಯ ಖಾಜಸಾಬ ಗುರಿಕಾರ ಸೇರಿದಂತೆ ಸಿಬ್ಬಂದಿ ಇದ್ದರು.

ಇಲ್ಲಿನ ಹರಿಜನ ಕಾಲೊನಿಯಲ್ಲಿರುವ ವೃತ್ತದಲ್ಲಿ ನಡೆದ ಕಾರ್ಯಕ್ರಮದಲ್ಲಿ ತಹಶೀಲ್ದಾರ್ ರವಿ ಅಂಗಡಿ, ಪಟ್ಟಣ ಪಂಚಾಯಿತಿ ಅಧ್ಯಕ್ಷ ರವೀಂದ್ರ ಸಜ್ಜನ್ ,
ಕೃಷಿ ಪ್ರಾಥಮಿಕ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಬಿ. ಕನಕಪ್ಪ ಹಾಗೂ ಪಟ್ಟಣ ಪಂಚಾಯಿತಿ ಸದಸ್ಯ ರವಿ ಭಜಂತ್ರಿ ಇದ್ದರು.

ಬಿಜೆಪಿ ಎಸ್ಸಿ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ಸಣ್ಣ ಕನಕಪ್ಪ ಅವರು ಡಾ. ಜಗಜೀವನರಾಂ ಅವರ ಜೀವನ ಚರಿತ್ರೆ ಕುರಿತು ತಿಳಿಸಿದರು.

ಪ್ರಮುಖರಾದ ಪಾಮಣ್ಣ ಅರಳಿಗನೂರು, ಕಂಠಿ ಮ್ಯಾಗಡೆ, ಶಾಂತಪ್ಪ ಬಸರಿಗಿಡದ ಮುನಿಸ್ವಾಮಿ ಹಾಗೂ ಕನಕಪ್ಪ ಮ್ಯಾಗಡೆ ಇದ್ದರು.

ಇಲ್ಲಿನ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕಚೇರಿಯಲ್ಲಿ ನಡೆದ ಜನ್ಮ ದಿನಾಚರಣೆಯಲ್ಲಿ ಸಂಘದ ಅಧ್ಯಕ್ಷೆ ಶಂಶಾದಬೇಗ್ಂ, ಪ್ರಧಾನ ಕಾರ್ಯದರ್ಶಿ ರಾಮಚಂದ್ರ ಮಾಕಣ್ಣವರ್, ಕೋಶಾಧ್ಯಕ್ಷ ಚೇತನಕುಮಾರ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಮಂಜುಳಾ ಶಾವಿ ಮಾತನಾಡಿದರು.

ಮಹಿಳಾ ಕಾರ್ಯದರ್ಶಿ ಪವಿತ್ರ ಮಂಜುನಾಥ ಹಾಗೂ ಶಿಕ್ಷಕ ಸಂತೋಷ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT