ಕೊಪ್ಪಳ: ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಒಕ್ಕೂಟ ರಾಜ್ಯ ಮಂಡಳಿಯು, ಬಿಸಿಯೂಟ ತಯಾರಕರ ನೌಕರಿ ಕಾಯಂ ಮಾಡುವಂತೆ ಒತ್ತಾಯಿಸಿ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಅ.10ರಂದು ಪ್ರತಿಭಟನೆ ನಡೆಸಲಿದ್ದು, 9ರಂದು ಜಿಲ್ಲೆಯಿಂದಲೂ ಬಿಸಿಯೂಟ ತಯಾರಕರು ಪಾಲ್ಗೊಳ್ಳುವರು.
‘ಹಿಂದಿನ ಸರ್ಕಾರ ಹೊಸದಾಗಿ ಜಾರಿ ಮಾಡಿರುವ ಶಾಲಾ ಮುಖ್ಯೋಪಾಧ್ಯಾಯರ ಮತ್ತು ಎಸ್‌ಡಿಎಂಸಿ ಅಧ್ಯಕ್ಷರ ಹೆಸರಲ್ಲಿ ಜಂಟಿ ಖಾತೆ ತೆರೆಯಬೇಕೆಂಬ ಅವೈಜ್ಞಾನಿಕ ಆದೇಶ ರದ್ದು ಮಾಡಬೇಕು. ಹಿಂದಿನಂತೆ ಶಾಲಾ ಮುಖ್ಯ ಶಿಕ್ಷಕರ ಮತ್ತು ಮುಖ್ಯ ಅಡುಗೆ ತಯಾರಕರ ಹೆಸರಿನಲ್ಲಿ ತೆರೆಯಲಾಗಿರುವ ಬ್ಯಾಂಕ್ ಖಾತೆ ಮುಂದುವರಿಸಬೇಕು. ಕೆಲಸದ ವೇಳೆ ಮೃತಪಟ್ಟವರ ಕುಟುಂಬದವರಿಗೆ ಪರಿಹಾರ ಒದಗಿಸಬೇಕು’ ಎನ್ನುವ ಬೇಡಿಕೆಗಳನ್ನು ಮುಂದಿಟ್ಟು ಹೋರಾಟ ನಡೆಸಲಾಗುತ್ತಿದೆ.
ಚುನಾವಣಾ ಸಂದರ್ಭದಲ್ಲಿ ಗೌರವಧನ ಹೆಚ್ಚಿಸುವ ಉದ್ದೇಶದಿಂದ ಪ್ರಿಯಾಂಕಾ ಗಾಂಧಿ ಘೋಷಿಸಿದ್ದ 6ನೇ ಗ್ಯಾರಂಟಿ ಜಾರಿ ಮಾಡಬೇಕು. ಪಿಂಚಣಿ ಯೋಜನೆಯನ್ನು ಜಾರಿಗೊಳಿಸಬೇಕು ಎನ್ನುವ ಬೇಡಿಕೆ ಈಡೇರಿಕೆಗೆ ಬೆಂಗಳೂರು ಚಲೊ ಹಮ್ಮಿಕೊಳ್ಳಲಾಗಿದೆ ಎಂದು ಮುಖಂಡ ಬಸವರಾಜ ಶೀಲವಂತರ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.