ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಪ್ಪಳ | ಜಗತ್ತಿನ ಮೊದಲ ಸಂಸತ್ತು ಸ್ಥಾಪಕ ಬಸವಣ್ಣ

ಬಸವ ಜಯಂತಿ ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಧನಂಜಯ ಮಾಲಗಿತ್ತಿ ಅಭಿಮತ
Last Updated 3 ಮೇ 2022, 13:09 IST
ಅಕ್ಷರ ಗಾತ್ರ

ಕನಕಗಿರಿ: ‘12ನೇ ಶತಮಾನದಲ್ಲಿ ಬಸವಣ್ಣನವರು ಜಗತ್ತಿನ ಮೊದಲ ಸಂಸತ್ತು ಅನುಭವ ಮಂಟಪ ಸ್ಥಾಪಿಸಿ ಮಹಿಳೆ, ಪುರುಷರು ಎನ್ನದೆ ಎಲ್ಲ ವರ್ಗದವರಿಗೂ ಅವಕಾಶ ನೀಡಿದ್ದರು’ ಎಂದು ತಹಶೀಲ್ದಾರ್ ಧನಂಜಯ ಮಾಲಗಿತ್ತಿ ತಿಳಿಸಿದರು.

ಇಲ್ಲಿನ ಬಸವೇಶ್ವರ ವೃತ್ತದಲ್ಲಿ ಮಂಗಳವಾರ ನಡೆದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಬಸವಣ್ಣನವರು ಒಬ್ಬ ವ್ಯಕ್ತಿಯಾಗಿರಲಿಲ್ಲ. ಪ್ರಚಂಡ ಶಕ್ತಿಯಾಗಿದ್ದರು. ವೇಶ್ಯೆಯರನ್ನು ಶರಣೆಯರನ್ನಾಗಿ ರೂಪಿಸಿದ ಮಹಾ ಮಾನವತವಾದಿಯಾಗಿದ್ದರು ಎಂದು ಹೇಳಿದರು.

ಬುದ್ಧ, ಬಸವಣ್ಣ ಹಾಗೂ ಡಾ.ಅಂಬೇಡ್ಕರ್ ಅವರು ಆರ್ಥಿಕ, ಸಾಮಾಜಿಕ, ಧಾರ್ಮಿಕ ರಂಗದಲ್ಲಿರುವ ಶ್ರೇಷ್ಠ, ಕನಿಷ್ಠ ಎಂಬ ಭಾವನೆ ತೊಲಗಿಸಿ ಸಮಾನತೆ ಹಾಗೂ ಸ್ವಾತಂತ್ರ್ಯ ತರಲು ಶ್ರಮಿಸಿದ್ದಾರೆ ಎಂದು ತಿಳಿಸಿದರು.

ಪಿಎಸ್ಐ ಸುನೀಲ ಮಾತನಾಡಿದರು.

ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ದತ್ತಾತ್ರೇಯ ಹೆಗಡೆ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ. ಗಂಗಾಧರಸ್ವಾಮಿ, ವಕ್ತಾರ ಶರಣಬಸಪ್ಪ ಭತ್ತದ, ಜಿಪಂ ಮಾಜಿ ಸದಸ್ಯ ವೀರೇಶ ಸಮಗಂಡಿ, ಬಿಜೆಪಿ ಎಸ್‌.ಸಿ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ಸಣ್ಣ ಕನಕಪ್ಪ, ಪಟ್ಟಣ ಪಂಚಾಯಿತಿ ಸದಸ್ಯರಾದ ಜಿ ಸುರೇಶ, ಸಂಗಪ್ಪ ಸಜ್ಜನ್, ಅನಿಲಕುಮಾರ ಬಿಜ್ಜಳ, ಶರಣೆಗೌಡ ಪಾಟೀಲ, ಮಾಜಿ ಅಧ್ಯಕ್ಷ ರವೀಂದ್ರ ಸಜ್ಜನ್, ಉಪಾಧ್ಯಕ್ಷ ಹುಲಗಪ್ಪ ವಾಲೇಕಾರ, ಸದಸ್ಯ ಮಂಜುನಾಥರೆಡ್ಡಿ ಮಾದಿನಾಳ, ಪ್ರಮುಖರಾದ ಪಶುಪತಿ ಪಾಟೀಲ, ಕನಕರೆಡ್ಡಿ ಕೆರಿ, ವಾಗೀಶ ಹಿರೇಮಠ, ಚೆನ್ನಪ್ಪ ತೆಗ್ಗಿಮನಿ, ದೇಸಾಯಿಗೌಡ ಹಾಗೂ ಇತರರು ಇದ್ದರು.

ಕಾಂಗ್ರೆಸ್ ಕಚೇರಿ: ಇಲ್ಲಿನ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ಬಸವ ಜಯಂತಿ ಆಚರಿಸಲಾಯಿತು. ಬಸವಣ್ಣನವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾಲಾರ್ಪಣೆ ಮಾಡಲಾಯಿತು.

ಪಟ್ಟಣ ಪಂಚಾಯಿತಿ ಸದಸ್ಯ ಕಂಠಿರಂಗ ನಾಯಕ, ಪ್ರಮುಖರಾದ ಕೃಷ್ಣಾ ವಡ್ಡಗೇರಿ, ರಾಮಣ್ಣ ಬ್ಯಾಳಿ, ಗಂಗಾಧರ ಗಂಗಾಮತ ಹಾಗೂ ವೆಂಕಟೇಶ ಗೋಡಿನಾಳ ಇದ್ದರು.

ಬಿಜೆಪಿ ಕಚೇರಿ ಹಾಗೂ ಶಾಲಾ–ಕಾಲೇಜುಗಳಲ್ಲಿ ಜಯಂತಿ ಆಚರಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT