ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಧರಣಿ ಸ್ಥಳದಲ್ಲಿಯೇ ಬುಟ್ಟಿ ಹೆಣೆಯುವ ಕಾಯಕ

Last Updated 28 ಸೆಪ್ಟೆಂಬರ್ 2022, 16:02 IST
ಅಕ್ಷರ ಗಾತ್ರ

ಕೊಪ್ಪಳ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನಗರದ ಜಿಲ್ಲಾಡಳಿತ ಭವನದ ಮುಂದೆ ನಡೆಯುತ್ತಿರುವ ಧರಣಿ ಬುಧವಾರ ಮೂರನೇ ದಿನ ಪೂರೈಸಿತು. ಧರಣಿ ನಿರತ ಮೇದಾರ ಸಮಾಜದ ಮಹಿಳೆಯರು ಅದೇ ಸ್ಥಳದಲ್ಲಿ ಬುಟ್ಟಿ ಹೆಣೆದರು.

ನಾಗರಿಕ ಹಕ್ಕುಗಳ ಹೋರಾಟ ವೇದಿಕೆ, ಪ್ರಗತಿಪರ ಸಂಘಟನೆಗಳ ಒಕ್ಕೂಟದ ಜಿಲ್ಲಾ ಸಮಿತಿ ಮತ್ತು ಕರಕುಶಲ ಕೈಗಾರಿಕಾ ಮೇದಾರ ಮಹಿಳಾ ಕ್ಷೇಮಾಭಿವೃದ್ಧಿ ಸಂಘದ ಸದಸ್ಯರು ಧರಣಿ ನಡೆಸುತ್ತಿದ್ದಾರೆ. ಮೇದಾರ ಜನಾಂಗದ 41 ಜನ ನಿವೇಶನ ರಹಿತರಿಗೆ ನಿವೇಶನ ಹಂಚಿಕೆ ಮಾಡಿ ಹಕ್ಕುಪತ್ರ ಕೊಡಬೇಕು ಎನ್ನುವುದು ಅವರ ಪ್ರಮುಖ ಬೇಡಿಕೆಯಾಗಿದೆ.

ನಗರಸಭೆ ಪೌರಾಯುಕ್ತ ಎಚ್‌.ಎನ್‌. ಭಜಕ್ಕನವರ, ಕೊಪ್ಪಳ ತಹಶೀಲ್ದಾರ್‌ ವಿಠ್ಠಲ್‌ ಚೌಗುಲಾ ಸೇರಿದಂತೆ ಹಲವು ಅಧಿಕಾರಿಗಳು ಧರಣಿ ಸ್ಥಳಕ್ಕೆ ಭೇಟಿ ನೀಡಿ ’ನಿಮ್ಮ ಬೇಡಿಕೆಗಳನ್ನು ಈಡೇರಿಸಲು ಕಾಲಾವಕಾಶ ನೀಡಬೇಕು’ ಎಂದು ಕೋರಿದರು. ಆಗ ಹೋರಾಟಗಾರರು ‘ನಮ್ಮ ಬೇಡಿಕೆ ಈಡೇರಿಸುವ ಬಗ್ಗೆ ಖಾತ್ರಿ ನೀಡಬೇಕು. ಆದಷ್ಟು ಬೇಗಗೆ ಆಶ್ರಯ ಸಮಿತಿ ಸಭೆ ಕರೆಯಬೇಕು’ ಎಂದು ಆಗ್ರಹಿಸಿದರು. ಧರಣಿ ಗುರುವಾರವೂ ಮುಂದುವರಿಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT