ಗುರುವಾರ , ಅಕ್ಟೋಬರ್ 29, 2020
27 °C

ಕರಡಿ ದಾಳಿ: ರೈತನಿಗೆ ಗಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕನಕಗಿರಿ: ಅಡವಿಬಾವಿ ಗ್ರಾಮದಲ್ಲಿ ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದ ರೈತರೊಬ್ಬರ ಮೇಲೆ ಕರಡಿ ಭಾನುವಾರ ದಾಳಿ ಮಾಡಿದೆ. ರೈತ ಗಾಯಗೊಂಡಿದ್ದಾರೆ.

ಹಿರೇ ಕುಂಟೆಪ್ಪ ವಂಕಲಕುಂಟಿ ಗಾಯಗೊಂಡವರು.

ಕರಡಿ ಏಕಾಏಕಿ ಮೇಲೆ ಎರಗಿದ ಪರಿಣಾಮ ರೈತರ ಕಿವಿ,‌ಕುತ್ತಿಗೆ ಹಾಗೂ ಕೈಗಳಿಗೆ ಗಾಯಗಳಾಗಿವೆ. ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ‌ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಕೊಪ್ಪಳಕ್ಕೆ ಕಳಿಸಲಾಗಿದೆ ಎಂದು ತಿಳಿದುಬಂದಿದೆ.‌

ಅಡವಿಬಾವಿ ಗ್ರಾಮದ ಪರಿಸರದಲ್ಲಿ ಕರಡಿಗಳ ಹಾವಳಿ ಹೆಚ್ಚಾಗಿರುವ ಕುರಿತು ಅರಣ್ಯ ಇಲಾಖೆಯವರಿಗೆ ಮಾಹಿತಿ ನೀಡಿದ್ದರೂ ಬೋ‌ನ್ ವ್ಯವಸ್ಥೆ ಮಾಡಿಲ್ಲ ಎಂದು ಗ್ರಾಮಸ್ಥರು ದೂರಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.