ಗಂಗಾವತಿ: 'ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ವಿರೋಧಿಸಿ ಮೇ 27ಕ್ಕೆ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಹುಜನ ಪ್ರತಿಭಟನಾ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಅಖಿಲ ಭಾರತ ಮಾದಿಗ ದಂಡೋರ ಸಮಿತಿ ಸಂಸ್ಥಾಪಕ ರಾಜ್ಯಾಧ್ಯಕ್ಷ ಬಿ.ಹುಸೇನಪ್ಪ ಸ್ವಾಮಿ ಮಾದಿಗ ಹೇಳಿದರು.

ನಗರದದಲ್ಲಿ ಅಖಿಲ ಭಾರತ ಮಾದಿಗ ದಂಡೋರ ಸಮಿತಿಯಿಂದ ಸೋಮವಾರ ಪತ್ರಿಕಾಗೋಷ್ಠಿ ನಡೆಸಿದ ಅವರು, ‘ಕಾಂಗ್ರೆಸ್ ಸರ್ಕಾರ ಮೀಸಲಾತಿ ತಿದ್ದುಪಡಿ ವಿಷಯದಲ್ಲಿ ಸಂವಿಧಾನದ ನಿಯಮಗಳು ಉಲ್ಲಂಘಿಸಿದೆ. ಇದರಿಂದ ದಲಿತರಿಗೆ ತುಂಬ ಅನ್ಯಾಯವಾಗಿದೆ. ಈ ಪಕ್ಷಕ್ಕೆ ಮುಂದೆ ತಕ್ಕ ಪಾಠ ಕಲಿಸಬೇಕಾಗಿದೆ’ ಎಂದರು.

‘ಕಳೆದ ಕೆಲ ವರ್ಷಗಳಿಂದ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ವಿಚಾರದಲ್ಲಿ ನಡೆಯುತ್ತಿರುವ ಚರ್ಚೆ, ಸರ್ಕಾರದ ಕ್ರಮ ಸಮಾಜದಲ್ಲಿ ಅಸಮಾಧಾನಕ್ಕೆ ಕಾರಣವಾಗಿವೆ. ಕಾಂಗ್ರೆಸ್ ಬುದ್ಧ, ಅಂಬೇಡ್ಕರ್ ಅವರ ಆಶಯಗಳಿಗೆ ಧಕ್ಕೆ ತರುವ ಜೊತೆಗೆ ಎಸ್.ಸಿ.ಎಸ್.ಪಿ, ಟಿ.ಎಸ್.ಪಿ ಅನುದಾನಕ್ಕೂ ಕೊಕ್ಕೆ ಹಾಕುತ್ತಿದೆ. ಇವುಗಳನ್ನು ಖಂಡಿಸಿ ಬೆಂಗಳೂರಿನಲ್ಲಿ ಬೃಹ ತ್ ಸಮಾವೇಶ ಆಯೋಜಿಸಲಾಗುತ್ತಿದೆ ಎಂದರು.

ಅಖಿಲ ಭಾರತ ಮಾದಿಗ ದಂಡೋರ ಸಮಿತಿ ತಾಲ್ಲೂಕು ಅಧ್ಯಕ್ಷ ಕನಕಪ್ಪ ದೊಡ್ಡಮನಿ, ಮುಖಂಡ ಯಮನೂರಪ್ಪ ಗೋನಾಳ, ಶರಣಪ್ಪ ಕನಕಗಿರಿ, ಯಂಕಪ್ಪ, ಬೋಜಪ್ಪ, ಶಿವಪ್ಪ ಮಾದಿಗ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260526-35-295988019

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.