ಸೋಮವಾರ, ಮೇ 10, 2021
25 °C

ವಿದ್ಯಾರ್ಥಿಗಳೊಂದಿಗೆ ಬಿಇಒ ಸಂವಾದ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕನಕಗಿರಿ: ಗಂಗಾವತಿ ಕ್ಷೇತ್ರ ಶಿಕ್ಷಣಾಧಿಕಾರಿ ಸೋಮಶೇಖರಗೌಡ ಪಾಟೀಲ ಅವರು ತಾಲ್ಲೂಕಿನ ವಿವಿಧ ಪ್ರೌಢಶಾಲೆಗಳಿಗೆ ಶುಕ್ರವಾರ ಭೇಟಿ ನೀಡಿದರು.

ಪಟ್ಟಣದ ಸರ್ಕಾರಿ ಪ್ರೌಢಶಾಲೆ, ರುದ್ರಸ್ವಾಮಿ ಅನುದಾನಿತ ಪ್ರೌಢಶಾಲೆ, ಸಮೀಪದ ಸೋಮಸಾಗರ, ಗೌರಿಪುರ, ಮುಸಲಾಪುರ ಗ್ರಾಮದ ಸರ್ಕಾರಿ ಪ್ರೌಢಶಾಲೆಗಳ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳೊಂದಿಗೆ ಫಲಿತಾಂಶ ಹೆಚ್ಚಳಕ್ಕೆ ಸಂಬಂಧಿಸಿದಂತೆ ಸಂವಾದ ನಡೆಸಿದರು.

ಪರೀಕ್ಷೆಗಳನ್ನು ಧೈರ್ಯದಿಂದ ಎದುರಿಸಿ, ಭಯ ಪಡಬೇಡಿ ಎಂದು ಸಲಹೆ ನೀಡಿದರು.

ಶಿಕ್ಷಕರು ವಿದ್ಯಾರ್ಥಿಗಳಿಗೆ ಸೂಕ್ತ ಮಾರ್ಗದರ್ಶನ ನೀಡಿ ಫಲಿತಾಂಶ ಸುಧಾರಿಸಲು ಶ್ರಮಿಸಬೇಕೆಂದು ಹೇಳಿದರು.

ಉಪ ಪ್ರಾಂಶುಪಾಲ ಜಗದೀಶ ಹಾದಿಮನಿ, ಶಿಕ್ಷಣ ಸಂಯೋಜಕರಾದ ರಾಘವೇಂದ್ರ, ಆನಂದ ನಾಗಮ್ಮನವರ್, ಸಮೂಹ ಸಂಪನ್ಮೂಲ ವ್ಯಕ್ತಿ ವಿನಾಯಕ, ಮುಖ್ಯಶಿಕ್ಷಕರಾದ ಕರೆಗೌಡ, ಚೆನ್ನಯ್ಯ, ಶೇಖಪ್ಪ ಹಾಗೂ ಸುಮಿತ್ರ ಹಿರೇಮಠ ಇದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.