ಕುಷ್ಟಗಿ: ‘ಉಪ್ಪಾರ ಸಮುದಾಯಕ್ಕೆ ರಾಜಕೀಯ ಶಕ್ತಿ ಅಗತ್ಯವಿದ್ದು, ಭವಿಷ್ಯದಲ್ಲಿ ಸಮುದಾಯಕ್ಕೆ ರಾಜಕೀಯ ಶಕ್ತಿ ತುಂಬಲು ಪ್ರಾಮಾಣಿಕವಾಗಿ ಯತ್ನಿಸಲಾಗುವುದು’ ಎಂದು ಶಾಸಕ ದೊಡ್ಡನಗೌಡ ಪಾಟೀಲ ಹೇಳಿದರು.

ಪಟ್ಟಣದಲ್ಲಿ ಗುರುವಾರ ಆಯೋಜಿಸಿದ್ದ ಮಹರ್ಷಿ ಭಗೀರಥ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

‘ಪ್ರಸಕ್ತ ದಿನಗಳಲ್ಲಿ ಶಿಕ್ಷಣಕ್ಕೆ ಹೆಚ್ಚು ಮಹತ್ವವಿದೆ. ತಳ ಸಮುದಾಯಗಳಿಗೆ ಶೈಕ್ಷಣಿಕ ಜಾಗೃತಿ ಮೂಡಿಸುವ ಕೆಲಸ ಮಾಡಿದರೆ, ಸಹಜವಾಗಿ ಸಮಾಜದ ಏಳಿಗೆ ಆಗುತ್ತದೆ. ಸಹೋದರ ಸಮುದಾಯಗಳೊಂದಿಗೆ ಉತ್ತಮ ಬಾಂಧವ್ಯ ಇರಿಸಿಕೊಂಡಿರುವ ಉಪ್ಪಾರ ಸಮುದಾಯ ಪ್ರೀತಿ, ವಿಶ್ವಾಸ ಉಳಿಸಿಕೊಳ್ಳುವ ಮೂಲಕ ಇತರರಿಗೆ ಮಾದರಿಯಾಗಿದೆ’ ಎಂದು ಹೇಳಿದರು.

‘ಉಪ್ಪಾರ ಸಮುದಾಯಕ್ಕೆ ಅಗತ್ಯ ಮೂಲಸೌಲಭ್ಯ ಕಲ್ಪಿಸಲಾಗುವುದು. ನಿವೇಶನ ಒದಗಿಸಿದರೆ ಪಟ್ಟಣಲದಲ್ಲಿ ಭಗೀರಥ ಸಮುದಾಯ ಭವನಕ್ಕೆ ಸರ್ಕಾರದಿಂದ ಅನುದಾನ ಒದಗಿಸಲು ಪ್ರಯತ್ನಿಸುತ್ತೇನೆ. ಈಗಾಗಲೇ ನಿಡಶೇಸಿ, ಚಳಗೇರಿಯಲ್ಲಿ ತಲಾ ₹ 25 ಲಕ್ಷ ಖರ್ಚಿನಲ್ಲಿ ಭಗೀರಥ ಸಮುದಾಯ ಭವನಗಳು ನಿರ್ಮಾಣಗೊಳ್ಳುತ್ತಿವೆ’ ಎಂದು ಹೇಳಿದರು.

ಭಗೀರಥ ಶಿಕ್ಷಣ ಸಂಸ್ಥೆ ಅಧ್ಯಕ್ಷ ಶಿವನಗೌಡ ಪಾಟೀಲ ಮಾತನಾಡಿ, ‘ಉಪ್ಪಾರ ಸಮುದಾಯದ ಅಭಿವೃದ್ಧಿಗೆ ಸಹಕರಿಸಬೇಕು’ ಎಂದು ಮನವಿ ಮಾಡಿದರು.

ಶಿಕ್ಷಕ ರವಿನಾರಾಯಣ ಉಪ್ಪಾರ ವಿಶೇಷ ಉಪನ್ಯಾಸ ನೀಡಿದರು. ಉಪ್ಪಾರ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ರಾಂಪೂರಹಳ್ಳಿ ಭಗೀರಥ ಆನಂದ ಪುರಿ ಸ್ವಾಮೀಜಿ, ಮಹದೇವ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ತಾಲ್ಲೂಕು ಉಪ್ಪಾರ ಸಮುದಾಯದ ಸಂಘಟನೆ ಅಧ್ಯಕ್ಷ ಸಂಗಪ್ಪ ಭಾವಿಕಟ್ಟಿ ಅಧ್ಯಕ್ಷತೆ ವಹಿಸಿದ್ದರು.

ಮಾಜಿ ಶಾಸಕ ಕೆ.ಶರಣಪ್ಪ, ತುಂಗಭದ್ರಾ ಕಾಡಾ ಅಧ್ಯಕ್ಷ ಹಸನಸಾಬ್ ದೋಟಿಹಾಳ, ಉಪ ವಿಭಾಗಾಧಿಕಾರಿ ಮಹೇಶ ಮಾಲಗಿತ್ತಿ, ತಹಶೀಲ್ದಾರ್ ಅಶೋಕ ಶಿಗ್ಗಾವಿ, ಕಾಂಗ್ರೆಸ್ ಮುಖಂಡ ದೊಡ್ಡಬಸನಗೌಡ ಬಯ್ಯಾಪುರ, ನೇಮಣ್ಣ ಮೇಲಸಕ್ರಿ, ವೆಂಕಟೇಶ ಸಿಂಧನೂರು, ಮಲ್ಲಣ್ಣ ಪಲ್ಲೇದ, ಸಂಗನಗೌಡಜಾಲಿಹಾಳ, ಪುರಸಭೆ ಸದಸ್ಯ ಕಲ್ಲೇಶ ತಾಳದ, ಪರಸಪ್ಪ ಗುಜಮಾಗಡಿ ಸೇರಿದಂತೆ ಅನೇಕ ಪ್ರಮುಖರು, ವಿವಿಧ ಸಮುದಾಯಗಳ ಹಿರಿಯರು, ಯುವಕರು ಮತ್ತು ಮಹಿಳೆಯರು ಇದ್ದರು. ನಾಗರಾಜ ಉಪ್ಪಾರ ಸ್ವಾಗತಿಸಿದರು.

ಅದಕ್ಕೂ ಪೂರ್ವದಲ್ಲಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮಹರ್ಷಿ ಭಗೀರಥ ಭಾವಚಿತ್ರದ ಮೆರವಣಿಗೆ ಅದ್ದೂರಿಯಾಗಿ ನೆರವೇರಿತು. ಕುಂಭಕಲಶ ಹೊತ್ತ ಮಹಿಳೆಯರು, ಡೊಳ್ಳು ಇತರೆ ಕಲಾ ತಂಡಗಳು ಗಮನಸೆಳೆದವು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಮರೇಗೌಡ ಬಯ್ಯಾಪುರ ಇತರರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.