ಶನಿವಾರ, ಜುಲೈ 31, 2021
20 °C

ಸೇತುವೆ ನಿರ್ಮಾಣ ಕಾಮಗಾರಿಗೆ ಚಾಲನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಭಟ್ಟರ ನರಸಾಪುರ (ಗಂಗಾವತಿ): ತಾಲ್ಲೂಕಿನ ಕೇಸರಹಟ್ಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭಟ್ಟರ ನರಸಾಪುರ ಗ್ರಾಮದಲ್ಲಿ ₹5 ಕೋಟಿ ವೆಚ್ಚದ ಬಿಸಿಬಿ ಸೇತುವೆ ಕಾಮಗಾರಿಗೆ ಶಾಸಕ ಪರಣ್ಣ ಮುನವಳ್ಳಿ ಸೋಮವಾರ ಭೂಮಿಪೂಜೆ ನೆರವೇರಿಸಿದರು.

ನಂತರ ಮಾತನಾಡಿದ ಅವರು,‘ಸೇತುವೆ ನಿರ್ಮಾಣ ಕಾಮಗಾರಿ ಈ ಭಾಗದ ಜನರ ಬಹಳ ದಿನಗಳ ಬೇಡಿಕೆಯಾಗಿತ್ತು. ಹಾಗಾಗಿ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಯೋಜನೆ ಅಡಿ ಸುಮಾರು ₹5 ಕೋಟಿ ವೆಚ್ಚದಲ್ಲಿ ಈ ಸೇತುವೆ ನಿರ್ಮಾಣ ಮಾಡಲಾಗುತ್ತಿದೆ. 14 ಹಳ್ಳಿಯ ಗ್ರಾಮಸ್ಥರಿಗೆ ಅನುಕೂಲವಾಗುತ್ತದೆ. ಗುತ್ತಿಗೆದಾರರು ಗುಣಮಟ್ಟದ ಕಾಮಗಾರಿ ಮಾಡಬೇಕು’ ಎಂದರು.

ಬಿಜೆಪಿ ಗ್ರಾಮೀಣ ಮಂಡಲ ಅಧ್ಯಕ್ಷ ಚನ್ನಪ್ಪ ಮಳಿಗಿ, ಪ್ರಮುಖರಾದ ಸಣ್ಣಕ್ಕಿ‌ನೀಲಪ್ಪ, ಶರಣಯ್ಯಸ್ವಾಮಿ, ಬಸವನಗೌಡ ಮಳಿಗಿ, ಶರಣಪ್ಪ ಚಕ್ಕೋಟಿ, ಕುಮಾರೇಪ್ಪ, ವಿರುಪಣ್ಣ, ಗುತ್ತಿಗೆದಾರರಾದ ವೀರಯ್ಯಸ್ವಾಮಿ ಹಿರೇಮಠ, ಇಮಾಮಸಾಬ, ನಿರೂಪಾದಿ, ವೆಂಕಟೇಶ ಹಾಗೂ ಬಸವರಾಜ ಮಾಲಿಪಾಟೀಲ ಸೇರಿದಂತೆ ಹಲವರು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.