ಅಳವಂಡಿ: ಸಮೀಪದ ಬಿಸರಳ್ಳಿ ಗ್ರಾಮದಲ್ಲಿ ಕರ್ನಾಟಕ ರಾಜ್ಯ ಸಂಯುಕ್ತ ಕಟ್ಟಡ ಕಾರ್ಮಿಕರ ಸಂಘ ಮತ್ತು ವಿಶ್ವೇಶ್ವರಯ್ಯ ಕಟ್ಟಡ ಕಾರ್ಮಿಕರ ಸಂಘದ ವತಿಯಿಂದ ಅಂತರರಾಷ್ಟ್ರೀಯ ಕಾರ್ಮಿಕ ದಿನವನ್ನು ಆಚರಿಸಲಾಯಿತು.

ಕರ್ನಾಟಕ ರಾಜ್ಯ ಸಂಯುಕ್ತ ಕಟ್ಟಡ ಕಾರ್ಮಿಕರ ಸಂಘದ ಅಧ್ಯಕ್ಷ ಶರಣು ಗಡ್ಡಿ ಮಾತನಾಡಿ, ‘ಕಾರ್ಮಿಕರಿಗೆ ದಿನಕ್ಕೆ 8 ಗಂಟೆಗಳ ಕೆಲಸದ ಅವಧಿ, ನ್ಯಾಯವಾದ ವೇತನ, ಕಾರ್ಮಿಕರ ಹಕ್ಕುಗಳು ಹಾಗೂ ಸಂಘಟನೆಗಳ ಸ್ಥಾಪನೆಗಾಗಿ ಕಾರ್ಮಿಕರು ಹೋರಾಟ ನಡೆಸಿದ ಸ್ಫೂರ್ತಿಯೇ ಮೇ ದಿನವಾಗಿದೆ’ ಎಂದು ಹೇಳಿದರು.

ಪ್ರಸ್ತುತ ಸರ್ಕಾರವು 8 ಗಂಟೆಗಳ ಕೆಲಸದ ಅವಧಿಯನ್ನು ದುರ್ಬಲಗೊಳಿಸಿ 12 ಗಂಟೆಗಳ ದುಡಿಮೆಯನ್ನು ಜಾರಿಗೆ ತರಲು ನಾಲ್ಕು ಕಾರ್ಮಿಕ ಸಂಹಿತೆಗಳನ್ನು ಮಾಲೀಕರ ಪರವಾಗಿ ಜಾರಿಗೊಳಿಸುತ್ತಿದೆ ಎಂದು ಆರೋಪಿಸಿ, ಎಲ್ಲಾ ಕಾರ್ಮಿಕ ವರ್ಗವು ಮತ್ತೊಂದು ಚಳವಳಿಗೆ ಒಂದಾಗಬೇಕೆಂದರು.

ವಿಶ್ವೇಶ್ವರಯ್ಯ ಕಟ್ಟಡ ಕಾರ್ಮಿಕರ ಸಂಘದ ಅಧ್ಯಕ್ಷ ನಾಗರಾಜ್ ಬಿಕನಹಳ್ಳಿ ಮಾತನಾಡಿದರು. ಮುಖಂಡರಾದ ಬರಮಪ್ಪ ದೊಡ್ಮನಿ, ಸಿದ್ದಪ್ಪ, ಹನುಮಂತ, ಮೋದಿನ್ ಸಾಬ್, ಮೌನೇಶ್, ಮೌಲ ಹುಸೇನ್, ವೀರಣ್ಣ ಸಜ್ಜನ್, ನಿಸಾರ್ ಅಹ್ಮದ, ಶಿವಣ್ಣ, ಮಂಜುನಾಥ್, ಮೌನೇಶ್, ರಾಜೇಶ್ ಜಾಲಹಳ್ಳಿ ಸೇರಿದಂತೆ ಹಲವಾರು ಕಾರ್ಮಿಕರು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260506-35-537696478

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.