ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟಿಎಂಸಿ ನಾಯಕಿ ವಿರುದ್ದ ಕ್ರಮ ಕೈಗೊಳ್ಳಿ

ಪರಿಶಿಷ್ಟರ ಕುರಿತು ಅವಹೇಳನಕಾರಿ ಹೇಳಿಕೆ: ಬಿಜೆಪಿ ಎಸ್ಸಿ ಮೋರ್ಚಾದಿಂದ ಮನವಿ
Last Updated 18 ಏಪ್ರಿಲ್ 2021, 11:23 IST
ಅಕ್ಷರ ಗಾತ್ರ

ಕನಕಗಿರಿ: ‘ಪಶ್ಚಿಮ ಬಂಗಾಳದಲ್ಲಿ ಪರಿಶಿಷ್ಟ ಸಮುದಾಯದವರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ತೃಣಮೂಲ ಕಾಂಗ್ರೆಸ್ ಪಕ್ಷದ ನಾಯಕಿ ಸುಜಾತ ಮೊಂಡಲ್ ಖಾನ್ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿ ಬಿಜೆಪಿ ಎಸ್ಸಿ ಮೋರ್ಚಾ ಕಾರ್ಯಕರ್ತರು ಉಪ ತಹಶೀಲ್ದಾರ್‌ಗೆ ಶನಿವಾರ ಮನವಿ ಸಲ್ಲಿಸಿದರು.

ಬಿಜೆಪಿ ಮಂಡಲದ ಎಸ್ಸಿ ಮೋರ್ಚಾ ಅಧ್ಯಕ್ಷ ಹನುಮಂತಪ್ಪ ಬಸರಿಗಿಡದ ಮಾತನಾಡಿ,‘ಶೋಷಿತ ಸಮಾಜದ ಪರಿಶಿಷ್ಟ ಜಾತಿಯವರು ಭಿಕ್ಷುಕರಾಗಿದ್ದಾರೆ ಎಂದು ಹೇಳುವ ಮೂಲಕ ಸುಜಾತ ಅಜ್ಞಾನ ಪ್ರದರ್ಶಿಸಿದ್ದಾರೆ’ ಎಂದು ದೂರಿದರು.

ಪರಿಶಿಷ್ಟರು ಸ್ವಾಭಿಮಾನಿಗಳು, ಶ್ರಮ ಜೀವಿಗಳಾಗಿದ್ದಾರೆ. ಕೂಲಿ ಮಾಡಿ ತಿನ್ನುವ ಪ್ರವೃತ್ತಿ ಹೊಂದಿದ್ದಾರೆ. ಇವರ ಹೇಳಿಕೆ ದ್ವೇಷದ ಮನೋಭಾವದಿಂದ ಕೂಡಿದೆ’ ಎಂದು ತಿಳಿಸಿದರು.

‘ಈ ಮಹಿಳೆ ವಿರುದ್ದ ಕಠಿಣ ಕ್ರಮ ತೆಗೆದುಕೊಳ್ಳಬೇಕು’ ಎಂದು ಒತ್ತಾಯಿಸಿದರು.

ಪಟ್ಟಣ ಪಂಚಾಯಿತಿ ಸದಸ್ಯರಾದ ರವಿ ಭಜಂತ್ರಿ , ಸುಭಾಸ ಕಂದಕೂರ, ಪ್ರಮುಖರಾದ ದುರಗಪ್ಪ ಲಕ್ಕುಂಪುರ, ಟಿ.ಜೆ.ಶ್ರೀನಿವಾಸ, ಕಂಠಿ ಮ್ಯಾಗಡೆ, ತಿಮ್ಮಣ್ಣ, ಶರಣಪ್ಪ ಕನ್ನೆರಮಡಗು, ರಂಗಪ್ಪ ಕೊರಗಟಗಿ ಹಾಗೂ ಅರುಣಕುಮಾರ ಇದ್ದರು.

ಉಪ ತಹಶೀಲ್ದಾರ್ ಶಿವಕುಮಾರ ಅವರ ಮೂಲಕ ರಾಷ್ಟ್ರಪತಿ ಅವರಿಗೆ ಮನವಿ ಸಲ್ಲಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT