ಶುಕ್ರವಾರ, ಮಾರ್ಚ್ 31, 2023
32 °C
ರಾಜ್ಯದ ನಾಲ್ವರಿಗೆ ಕೇಂದ್ರ ಸಚಿವ ಸಂಪುಟದಲ್ಲಿ ಸ್ಥಾನ

ಕುಷ್ಟಗಿಯಲ್ಲಿ ಬಿಜೆಪಿ ಸಂಭ್ರಮಾಚರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕುಷ್ಟಗಿ: ರಾಜ್ಯದ ನಾಲ್ವರು ಸಂಸದರಿಗೆ ಕೇಂದ್ರ ಸಚಿವ ಸಂಪುಟದಲ್ಲಿ ಅವಕಾಶ ದೊರೆತಿರುವುದಕ್ಕೆ ಪಟ್ಟಣದಲ್ಲಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು.

ಬಸವೇಶ್ವರ ವೃತ್ತದಲ್ಲಿ ಪಟಾಕಿ ಸಿಡಿಸಿ ಸಾರ್ವಜನಿಕರಿಗೆ ಸಿಹಿ ವಿತರಿಸಿ ಹರ್ಷ ವ್ಯಕ್ತಪಡಿಸಿದರು.

ಶೋಭಾ ಕರಂದ್ಲಾಜೆ, ಭಗವಂತ ಖೂಬಾ, ಎ.ನಾರಾಯಣಸ್ವಾಮಿ ಮತ್ತು ರಾಜೀವ್‌ ಚಂದ್ರಶೇಖರ ಅವರನ್ನು ಸಚಿವರನ್ನಾಗಿ ಮಾಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ ರಾಜ್ಯದ ಜನತೆಗೆ ಉತ್ತಮ ಸಂದೇಶ ನೀಡಿದ್ದಾರೆ. ಇದರಿಂದ ರಾಜ್ಯ ಬಿಜೆಪಿಗೆ ಶಕ್ತಿ ನೀಡಿದಂತಾಗಿದೆ ಎಂದರು. ಯುವ ಮೋರ್ಚಾದ ಅಧ್ಯಕ್ಷ ಉಮೇಶ ಯಾದವ ಹಾಗೂ ಪಕ್ಷದ ಪ್ರಮುಖರು ಹಾಗೂ ಯುವ ಕಾರ್ಯಕರ್ತರು ಈ ವೇಳೆ
ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.