ಶುಕ್ರವಾರ, ಸೆಪ್ಟೆಂಬರ್ 24, 2021
24 °C

‘ನಾಯಕ ಸಮಾಜಕ್ಕೆ ಅನ್ಯಾಯ ಮಾಡಿದ ಬಿಜೆಪಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕನಕಗಿರಿ: ‘ಬಿಜೆಪಿ, ವಾಲ್ಮೀಕಿ ನಾಯಕ ಸಮಾಜಕ್ಕೆ ನಿರಂತರವಾಗಿ ಅನ್ಯಾಯ ಮಾಡುತ್ತಿದೆ’ ಎಂದು ಕನಕಗಿರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಹಾಗೂ ನಾಯಕ ಸಮಾಜದ ಮುಖಂಡ ರಮೇಶ ನಾಯಕ ದೂರಿದ್ದಾರೆ.

ಬಿಜೆಪಿ ಅಧಿಕಾರಕ್ಕೆ ಬಂದ 24 ಗಂಟೆಯೊಳಗೆ ವಾಲ್ಮೀಕಿ ಸಮಾಜಕ್ಕೆ ಶೇ. 7. 5 ರಷ್ಟು ಮೀಸಲಾತಿ ಕೊಡುವುದಾಗಿ ಭರವಸೆ ನೀಡಿ ಎರಡು ವರ್ಷ ಗತಿಸಿದೆ. ಇಲ್ಲಿವರೆಗೂ ನ್ಯಾಯ ಒದಗಿಸಿಲ್ಲ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.

2018 ರ ವಿಧಾನಸಭಾ ಚುನಾವಣೆಯಲ್ಲಿ ವಾಲ್ಮೀಕಿ ಸಮಾಜದ ಹಿರಿಯ ಮುಖಂಡ ಬಿ. ಶ್ರೀರಾಮುಲು ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡುವುದಾಗಿ ಪ್ರಚಾರ ಮಾಡಿ ಅಧಿಕಾರಕ್ಕೆ ಬಂದರೂ ಇಲ್ಲಿವರೆಗೆ ಉಪ ಮುಖ್ಯಮಂತ್ರಿ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸ್ಥಾನ ನೀಡಿಲ್ಲ. ರಾಜ್ಯದಲ್ಲಿ ಪ್ರಚಾರ ಮಾಡಿ ಓಟು ಪಡೆಯಲು ಮಾತ್ರ ರಾಮುಲು ಅವರನ್ನು ಬಿಜೆಪಿ ಬಳಸಿಕೊಂಡಿದೆ ಎಂದು ಅವರು ಆರೋಪಿಸಿದರು.

ವಸತಿ ಯೋಜನೆಯಲ್ಲಿ ಮನೆ ನಿರ್ಮಾಣಕ್ಕೆ ಪರಿಶಿಷ್ಟ ಜಾತಿಯವರಿಗೆ ₹5 ಲಕ್ಷ ಅನುದಾನ ನೀಡುವುದಾಗಿ ವಸತಿ ಸಚಿವ ಶ್ರೀನಿವಾಸ ಪೂಜಾರಿ ಘೋಷಣೆ ಮಾಡಿದ್ದು, ಪರಿಶಿಷ್ಟ ಪಂಗಡದವರಿಗೂ ಏಕೆ ನೀಡಿಲ್ಲ.  ಈ ಹಿಂದಿನ ಸರ್ಕಾರದಲ್ಲಿ ಯೋಜನೆಗಳು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರಿಗೆ ಸಮಾನವಾಗಿ ಸಿಗುತ್ತಿದ್ದವು. ಸಚಿವರು ಇಲ್ಲಿ ಒಡೆದು ಆಳುವ ನೀತಿ ಅನುಸರಿಸಿದ್ದಾರೆ. ಪರಿಶಿಷ್ಟ ಪಂಗಡದವರಿಗೂ ₹5 ಲಕ್ಷ ಅನುದಾನ ನೀಡಬೇಕು ಇಲ್ಲದಿದ್ದರೆ ಪ್ರತಿಭಟನೆ ನಡೆಸುವುದಾಗಿ ಅವರು ಎಚ್ಚರಿಕೆ ನೀಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು