ಕೊಪ್ಪಳ: ಜಿಲ್ಲಾಸ್ಪತ್ರೆಯಲ್ಲಿ ಒಂದೇ ವಾರದಲ್ಲಿ ಇಬ್ಬರು ಬಾಣಂತಿ ಹಾಗೂ ನವಜಾತ ಶಿಶುಗಳು ಮೃತಪಟ್ಟ ಹಿನ್ನೆಲೆಯಲ್ಲಿ ಬಿಜೆಪಿ ತನ್ನ ಹೋರಾಟವನ್ನು ಮುಂದುವರಿಸಿದೆ. ಇದರ ಭಾಗವಾಗಿ ಜ. 6ರಂದು ಬಿಜೆಪಿಯ ಸತ್ಯಶೋಧನಾ ತಂಡ ನಗರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಿದೆ.

ಶಾಸಕರಾದ ಡಾ. ಶೈಲೇಂದ್ರ ಬೆಲ್ದಾಳೆ, ಅವಿನಾಶ ಜಾಧವ್, ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಡಾ. ಬಸವರಾಜ ಕ್ಯಾವಟರ್, ಮಹಿಳಾ ಮೋರ್ಚಾ ರಾಜ್ಯ ಘಟಕದ ಅಧ್ಯಕ್ಷೆ ಮಂಜುಳಾ, ವೈದ್ಯಕೀಯ ಪ್ರಕೋಷ್ಠದ ರಾಜ್ಯ ಸಂಚಾಲಕ ಡಾ. ನಾರಾಯಣ, ಜಿಲ್ಲಾ ಉಪಾಧ್ಯಕ್ಷೆ ಡಾ. ಅರುಣಾ, ಮಹಿಳಾ ಮೋರ್ಚಾ ರಾಜ್ಯ ಖಜಾಂಚಿ ವಿಜಯಲಕ್ಷ್ಮಿ ಕರೂರು, ಮುಖಂಡರಾದ ಡಾ. ಸುಧಾ ಹಲ್ಕಾಯಿ, ಡಾ. ಲಕ್ಷ್ಮಣ ಮತ್ತು ರಾಜ್ಯ ಮಾಧ್ಯಮ ಸಮಿತಿ ರತನ್ ರಮೇಶ ಪೂಜಾರಿ ತಂಡದಲ್ಲಿದ್ದಾರೆ.

ಈ ತಂಡ ಇತ್ತೀಚೆಗೆ ಮೃತಪಟ್ಟ ಕುಕನೂರು ತಾಲ್ಲೂಕಿನ ಆಡೂರು ಗ್ರಾಮದ ರೇಣುಕಾ ಹಿರೇಮನಿ ಅವರ ನಿವಾಸಕ್ಕೆ ಭೇಟಿ ನೀಡಲಿದೆ. ಬಳಿಕ ಜಿಲ್ಲಾಸ್ಪತ್ರೆಗೆ ತೆರಳಲಿದೆ. ಬಿಜೆಪಿ ಜಿಲ್ಲಾಧ್ಯಕ್ಷ ನವೀನ್ ಗುಳಗಣ್ಣನವರ ಜಿಲ್ಲಾ ಸಂಯೋಜಕರಾಗಿ ತಂಡದ ಜೊತೆಗೆ ಕಾರ್ಯನಿರ್ವಹಿಸುವರು ಎಂದು ಪಕ್ಷದ ಮಹಿಳಾ ಮೋರ್ಚಾ ರಾಜ್ಯ ಅಧ್ಯಕ್ಷೆ ಮಂಜುಳಾ ತಿಳಿಸಿದ್ದಾರೆ.

ಹೆರಿಗೆಗಾಗಿ ಇಲ್ಲಿನ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದ ಜಿಲ್ಲೆಯ ರೇಣುಕಾ ಹಿರೇಮನಿ ಹಾಗೂ ಇದಕ್ಕೂ ಮೊದಲು ಸಂಡೂರಿನ ಐಶ್ವರ್ಯಾ ಎಂಬುವವರು ಹೆರಿಗೆಯಾದ ಬಳಿಕ ಮೃತಪಟ್ಟಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.