ಕೊಪ್ಪಳ: ತಮ್ಮ ಆಡಳಿತದ ಅವಧಿಯಲ್ಲಿ ಮಾಡಿದ ಭ್ರಷ್ಟಾಚಾರದ ಪಾಪ ತೊಳೆದುಕೊಳ್ಳಲು ಬಿಜೆಪಿ ಈಗ ಪಾದಯಾತ್ರೆ ಮಾಡುತ್ತಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ ತಂಗಡಗಿ ಹೇಳಿದರು.

ನಗರದಲ್ಲಿ ಶನಿವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ಹಿಂದಿನ ಬಿಜೆಪಿ ಸರ್ಕಾರದಲ್ಲಿ ಭೋವಿ ನಿಗಮದಲ್ಲಿ ಕೋಟ್ಯಂತರ ರೂಪಾಯಿ ಭ್ರಷ್ಟಾಚಾರವಾಗಿದ್ದು, ಆಗಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಯಾವ ತನಿಖೆಯನ್ನೂ ನಡೆಸಲಿಲ್ಲ. ಬಿಜೆಪಿ ತನ್ನ ಕಾಲದ ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಲೇ ಇಲ್ಲ. ಈಗ ಯಾವ ಮುಖ ಹೊತ್ತು ಪಾದಯಾತ್ರೆ ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದರು.

ಕರಕುಶಲ ಅಭಿವೃದ್ಧಿ ನಿಗಮದಲ್ಲಿ ಬಿಜೆಪಿ ಅವಧಿಯಲ್ಲಿ ಭ್ರಷ್ಟಾಚಾರವಾಗಿದ್ದರೂ ಸುಮ್ಮನಿದ್ದರು. ನಾವು ವಾಲ್ಮೀಕಿ ನಿಗಮದ ಹಗರಣ ತನಿಖೆಗೆ ಕೊಟ್ಟಿದ್ದೇವೆ ಎಂದರು.

ಬಿಜೆಪಿಯವರು ಸಾಚಾಗಳು ಎಂಬಂತೆ ಬಿಂಬಿಸಿಕೊಳ್ಳುತ್ತಿದ್ದಾರೆ. ಕೆಲವೇ ದಿನಗಳಲ್ಲಿ ಅವರ ಬಣ್ಣ ಬಯಲಾಗುತ್ತದೆ. ರಾಜ್ಯದಲ್ಲಿ ಸಿ.ಎಂ. ಖುರ್ಚಿ ಖಾಲಿ ಇಲ್ಲ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.