ಕೊಪ್ಪಳ: ‘ಮುಂಬರುವ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಯಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರಬೇಕು’ ಎಂದುಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ ತಿಳಿಸಿದರು.

ಪಕ್ಷದ ಜಿಲ್ಲಾ ಕಚೇರಿಯಲ್ಲಿ ನಡೆದ ಡಾ.ಶ್ಯಾಮ್‌ಪ್ರಸಾದ ಮುಖರ್ಜಿ ಅವರ 120 ನೇ ಜಯಂತಿ ಕಾರ್ಯಕ್ರಮದಲ್ಲಿ ವರ್ಚುವಲ್ ಸಭೆ ಉದ್ಘಾಟಿಸಿ ಮಾತನಾಡಿದರು.

ಮಹಾನ್ ರಾಷ್ಟ್ರಭಕ್ತ, ಶ್ರೇಷ್ಠ ಶಿಕ್ಷಣ ತಜ್ಞ, ಭಾರತೀಯ ಜನಸಂಘದ ಸಂಸ್ಥಾಪಕ ಡಾ. ಮುಖರ್ಜಿ ಅವರ ಜಯಂತಿ ಅಂಗವಾಗಿ ಜಿಲ್ಲೆಯ ಎಲ್ಲ ಮಂಡಲಗಳಲ್ಲಿ ಸಸಿ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಬೇಕು. ಪರಿಸರ ಶುಚಿಗೊಳಿಸಬೇಕು. ಪ್ರತಿ ಬೂತ್ ಮಟ್ಟದಲ್ಲಿ ಸಕ್ರಿಯ ಕಾರ್ಯಕರ್ತರ ಪಡೆ ರಚಿಸುವಲ್ಲಿ ಮಹತ್ವದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ಮನವಿ ಮಾಡಿದರು.

ಪಕ್ಷದಜಿಲ್ಲಾ ಘಟಕದ ಅಧ್ಯಕ್ಷ ದೊಡ್ಡನಗೌಡ ಪಾಟೀಲ ಮಾತನಾಡಿದರು. ವಿಭಾಗೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಪ್ರಮೋದ್.ಎನ್, ಪಕ್ಷ ಸಂಘಟನೆಯ ಕುರಿತು ಮಾತನಾಡಿದರು.ವಿಭಾಗೀಯ ಸಹ ಪ್ರಭಾರ ಮತ್ತು ಮಾಜಿ ಶಾಸಕ ನೇಮಿರಾಜ್ ನಾಯ್ಕ ಮಾತನಾಡಿದರು.

ಸಂಸದ ಕರಡಿ ಸಂಗಣ್ಣ, ಶಾಸಕ ಹಾಲಪ್ಪ ಆಚಾರ, ಪರಣ್ಣ ಮುನವಳ್ಳಿ, ರಾಜ್ಯ ಕಾರ್ಯದರ್ಶಿ ಹೇಮಲತಾ ನಾಯಕ್, ಜಿಲ್ಲಾ ಪ್ರಭಾರ ಪ್ರಭುರಾಜ ಕಪ್ಪಗಲ್ ಡಾ.ಮುಖರ್ಜಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರಗೌಡ ಜಿ ಪಾಟೀಲ ಹಲಗೇರಿ ನಿರೂಪಿಸಿದರು. ನವೀನ ಗುಳಗಣ್ಣವರ್ ಸ್ವಾಗತಿಸಿದರು. ರಮೇಶ್ ನಾಡಿಗೇರ್ ವಂದಿಸಿದರು. ಜಿಲ್ಲಾ ಮಾಧ್ಯಮ ಸಂಚಾಲಕ ಬಿ.ಗಿರೀಶಾನಂದ ನಿರೂಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.