ಸೋಮವಾರ, 11 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಚಿವರ ಭರವಸೆ: ಉಪವಾಸ ಕೈಬಿಟ್ಟ ಸಂಸದ ಸಂಗಣ್ಣ

Published 7 ನವೆಂಬರ್ 2023, 14:34 IST
Last Updated 7 ನವೆಂಬರ್ 2023, 14:34 IST
ಅಕ್ಷರ ಗಾತ್ರ

ಕೊಪ್ಪಳ: ರೈತರ ಕೃಷಿ ಪಂಪ್‌ಸೆಟ್‌ಗಳಿಗೆ ಪರಿವರ್ತಕ ಸಹಿತ ಉಚಿತ ಮೂಲಸೌಕರ್ಯ ಒದಗಿಸುವ ಯೋಜನೆಯ ವಾಪಸ್‌ ಆದೇಶ ರದ್ದುಪಡಿಸಬೇಕು ಎಂದು ಅಗ್ರಹಿಸಿ ಬಿಜೆಪಿ ಸಂಸದ ಸಂಗಣ್ಣ ಕರಡಿ ಸೋಮವಾರ ಆರಂಭಿಸಿದ್ದ ಉಪವಾಸ ಸತ್ಯಾಗ್ರಹ ಮಂಗಳವಾರ ಮಧ್ಯಾಹ್ನ ಅಂತ್ಯಕಂಡಿತು.

ಪ್ರಗತಿ ಪರಿಶೀಲನಾ ಸಭೆ ನಡೆಸಲು ಇಲ್ಲಿಗೆ ಬಂದಿದ್ದ ಕಂದಾಯ ಸಚಿವ ಕೃಷ್ಣ ಬೈರೇಗೌಡ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಪ್ರತಿಭಟನಾ ಸ್ಥಳಕ್ಕೆ ಬಂದು ಸಂಸದರಿಂದ ಸಮಸ್ಯೆ ಆಲಿಸಿದರು.

ಮುಖ್ಯಮಂತ್ರಿ ಮತ್ತು ಇಂಧನ ಸಚಿವ ಕೆ.ಜೆ. ಜಾರ್ಜ್ ಅವರೊಂದಿಗೆ ಫೋನ್‌ನಲ್ಲಿ ಮಾತನಾಡಿದ ಸಚಿವದ್ವಯರು, ‘ನವೆಂಬರ್‌ 9ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ಚರ್ಚಿಸಲಾಗುವುದು’ ಎಂದು ಭರವಸೆ ನೀಡಿದರು. ತಂಗಡಗಿ ಮತ್ತು ಬರ ಅಧ್ಯಯನ ಪ್ರವಾಸಕ್ಕೆ ಬಂದಿದ್ದ ಬಿಜೆಪಿ ಮುಖಂಡ ಕೆ.ಎಸ್‌. ಈಶ್ವರಪ್ಪ ಮನವೊಲಿಸಿದ್ದರಿಂದ ಸಂಸದ ಉಪವಾಸ ಕೈಬಿಟ್ಟರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT