ಕೊಪ್ಪಳ: ಮೆಕ್ಕೆಜೋಳ ಖರೀದಿಗೆ ರಾಜ್ಯ ಸರ್ಕಾರ ಸಕಾಲದಲ್ಲಿ ಸಮರ್ಪಕ ಕ್ರಮ ಕೈಗೊಂಡಿಲ್ಲ ಎಂದು ಬಿಜೆಪಿಯ ನಾಯಕರು ನಗರದಲ್ಲಿ ಸೋಮವಾರ ವಿನೂತನವಾಗಿ ಪ್ರತಿಭಟನೆ ನಡೆಸಿದರು.

ನಗರದ ಗಡಿಯಾರ ಕಂಬದಿಂದ ಅಶೋಕ ವೃತ್ತದ ತನಕ ಎತ್ತಿನಬಂಡಿಗಳಲ್ಲಿ ತಂದು, ಮೆಕ್ಕೆಜೋಳ ತೆನೆಗಳನ್ನು ರಸ್ತೆಗೆ ಸುರಿದು ಆಕ್ರೋಶ ವ್ಯಕ್ತಪಡಿಸಿದ ಪಕ್ಷದ ನಾಯಕರು ಸರ್ಕಾರದ ವಿರುದ್ಧ ಭಿತ್ತಿಪತ್ರಗಳನ್ನು ಪ್ರದರ್ಶಿಸಿದರು. ಸರ್ಕಾರದ ಖಜಾನೆಯಲ್ಲಿ ಯಾವುದಕ್ಕೂ ಹಣವಿಲ್ಲ, ರಾಜ್ಯದ ಅನ್ನದಾತರಿಗೆ ಕೈಕೊಟ್ಟ ಸರ್ಕಾರ, ರಾಜ್ಯದ ಜೀವ ಹಿಂಡುತ್ತಿದ್ದ ಕಾಂಗ್ರೆಸ್ ಸರ್ಕಾರ ಎನ್ನುವ ಸಂದೇಶಗಳನ್ನು ಒಳಗೊಂಡ ಭಿತ್ತಿಚಿತ್ರ ತೋರಿಸಿದರು.

ಬಿಜೆಪಿ ರೈತಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್. ಪಾಟೀಲ ನಡಹಳ್ಳಿ ಮಾತನಾಡಿ ‘ಮೆಕ್ಕೆಜೋಳವನ್ನು ಬೆಂಬಲ ಬೆಲೆಯಲ್ಲಿ ಖರೀದಿ ಮಾಡಲು ಕೇಂದ್ರಗಳನ್ನು ತೆರೆಯುವಂತೆ ಸರ್ಕಾರವನ್ನು ಆಗ್ರಹಿಸಿದ್ದೆವು. ಮುಖ್ಯಮಂತ್ರಿ ಸ್ಥಾನಕ್ಕಾಗಿ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ನಡುವಿನ ಗುದ್ದಾಟದಲ್ಲಿ ರೈತರು ಬಡವಾಗಿದ್ದಾರೆ. ಬೆಳಗಾವಿ ಅಧಿವೇಶನಕ್ಕೂ ಮೊದಲು ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲಾಗುವುದು. ಡಿ. 8ರಂದು ಸಾವಿರಾರು ರೈತರ ಜೊತೆ ತೆರಳಿ ಮುತ್ತಿಗೆ ಹಾಕುವ ಯೋಜನೆಯಿದೆ’ ಎಂದು ತಿಳಿಸಿದರು.

‘ರೈತರ ವಿಷಯದಲ್ಲಿ ಬಿಜೆಪಿ ಸದಾ ಹೋರಾಟ ಮಾಡುತ್ತಲೇ ಬಂದಿದೆ. ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳು ಪ್ರಧಾನವಾಗಿ ಚರ್ಚೆಯಾಗಬೇಕು. ಸರ್ಕಾರ ಮನಸ್ಸು ಮಾಡಿದ್ದರೆ ತುಂಗಭದ್ರಾ ಜಲಾಶಯದಿಂದ ಎರಡನೇ ಬೆಳೆಗೆ ನೀರು ಕೊಡಬಹುದಿತ್ತು’ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಶಾಸಕರಾದ ದೊಡ್ಡನಗೌಡ ಪಾಟೀಲ, ಜನಾರ್ದನ ರೆಡ್ಡಿ, ವಿಧಾನಪರಿಷತ್ ಸದಸ್ಯೆ ಹೇಮಲತಾ ನಾಯಕ, ಪಕ್ಷದ ಜಿಲ್ಲಾಧ್ಯಕ್ಷ ಬಸವರಾಜ ದಢೇಸೂಗೂರು, ರೈತ ಮೋರ್ಚಾ ಜಿಲ್ಲಾಧ್ಯಕ್ಷ ಅಶೋಕ ಗುಳದಳ್ಳಿ, ಮಾಜಿ ಸಂಸದ ಶಿವರಾಮಗೌಡ, ನಿಕಟಪೂರ್ವ ಜಿಲ್ಲಾಧ್ಯಕ್ಷ ನವೀನ್ ಗುಳಗಣ್ಣನವರ, ಪಕ್ಷದ ರಾಜ್ಯ ಕಾರ್ಯಕಾರಿಣಿ ಸದಸ್ಯ ಡಾ. ಬಸವರಾಜ ಕ್ಯಾವಟರ್, ಮಾಜಿ ಸಚಿವ ನಾಗಪ್ಪ ಸಾಲೋಣಿ, ಮಾಜಿ ಶಾಸಕರಾದ ಪರಣ್ಣ ಮುನವಳ್ಳಿ, ಜಿ. ವೀರಪ್ಪ, ಬಳ್ಳಾರಿ ವಿಭಾಗದ ಸಹ ಪ್ರಭಾರಿ ಚಂದ್ರಶೇಖರಗೌಡ ಪಾಟೀಲ ಹಲಗೇರಿ, ಕಾಡಾ ಮಾಜಿ ಅಧ್ಯಕ್ಷ ತಿಪ್ಪೇರುದ್ರಸ್ವಾಮಿ, ಬಿಜೆಪಿ ಮುಖಂಡರಾದ ಗೌರಾ ಬಸವರಾಜ್, ಯಮನೂರಪ್ಪ ಚೌಡಕಿ, ಮಹಾಲಕ್ಷ್ಮೀ ಕಂದಾರಿ, ಗಣೇಶ ಹೊರತಟ್ನಾಳ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.

ರಾಜ್ಯ ಸರ್ಕಾರದ ನಿರ್ಲಕ್ಷ್ಯದಿಂದ ತುಂಗಭದ್ರಾ ಜಲಾಶಯ ವ್ಯಾಪ್ತಿಯ ರೈತರಿಗೆ ಅನ್ಯಾಯವಾಗಿದೆ. ಸರ್ಕಾರ ಪ್ರತಿ ಎಕರೆಗೆ ₹25 ಸಾವಿರ ಪರಿಹಾರ ಕೊಡಬೇಕು.

-ಎ.ಎಸ್. ಪಾಟೀಲ ನಡಹಳ್ಳಿ ಬಿಜೆಪಿ ರೈತಮೋರ್ಚಾ ರಾಜ್ಯಾಧ್ಯಕ್ಷ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.