ಕೊಪ್ಪಳ: ಜಿಲ್ಲೆಯ ಗಂಗಾವತಿಯ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ವೆಂಕಟೇಶ್ (31) ಅವರನ್ನು ಮಂಗಳವಾರ ಮಧ್ಯರಾತ್ರಿ ಮಾರಕಾಸ್ತ್ರಗಳಿಂದ ದುಷ್ಕರ್ಮಿಗಳು ಕೊಚ್ಚಿ ಕೊಲೆ ಮಾಡಿದ್ದಾರೆ.

‘ಸ್ನೇಹಿತರೆಲ್ಲರೂ ಸೇರಿಕೊಂಡು ರಾತ್ರಿ ಊಟಕ್ಕೆ ಹೋಗಿದ್ದವು. ವಾಪಸ್ ಬರುವಾಗ ಏಳೆಂಟು ಜನ ಮಾರಕಾಸ್ತ್ರಗಳನ್ನು ಹಿಡಿದುಕೊಂಡು ಬಂದು ಹಲ್ಲೆ ಮಾಡಿದರು. ನಮ್ಮನ್ನು ಬೆದರಿಸಿ ಓಡಿಸಿದರು’ ಎಂದು ಜೊತೆಯಲ್ಲಿದ್ದ ವೆಂಕಟೇಶ ಸ್ನೇಹಿತ ರಾಮು ಮಧ್ಯಮಗಳಿಗೆ ತಿಳಿಸಿದರು

ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್. ಅರಸಿದ್ಧಿ, ಶ್ವಾನದಳ ಹಾಗೂ ಬೆರಳಚ್ಚು ತಂಡದವರು ಭೇಟಿ ನೀಡಿ ಮಾಹಿತಿ ಪಡೆದುಕೊಂಡರು.

‘ಗುಂಪಾಗಿ ಬಂದು ದುಷ್ಕರ್ಮಿಗಳು ಕೃತ್ಯ ಎಸಗಿದ್ದಾರೆ ಎನ್ನುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಹಳೆ ದ್ವೇಷದ ಕಾರಣಕ್ಕೆ ಘಟನೆ ನಡೆದಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಪೂರ್ಣ ತನಿಖೆಯ ಬಳಿಕ ವಿವರ ಗೊತ್ತಾಗಲಿದೆ’ ಎಂದು ಅರಸಿದ್ಧಿ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.