ಸೋಮವಾರ, 4 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುನಿರಾಬಾದ್: ತುಂಗಭದ್ರಾ ನದಿಯಲ್ಲಿ ನಾಪತ್ತೆಯಾಗಿದ್ದ ಬಾಲಕ ಶವವಾಗಿ ಪತ್ತೆ

ಹುಣ್ಣಿಮೆಯ ಅಂಗವಾಗಿ ಸೋಮವಾರ ಹುಲಿಗೆಮ್ಮದೇವಿ ದೇವಸ್ಥಾನಕ್ಕೆ ಬಂದಿದ್ದ ಬಾಲಕ
Published 28 ನವೆಂಬರ್ 2023, 6:54 IST
Last Updated 28 ನವೆಂಬರ್ 2023, 6:54 IST
ಅಕ್ಷರ ಗಾತ್ರ

ಮುನಿರಾಬಾದ್ (ಕೊಪ್ಪಳ ಜಿಲ್ಲೆ): ಗೌರಿ ಹುಣ್ಣಿಮೆಯ ಅಂಗವಾಗಿ ಸೋಮವಾರ ಹುಲಿಗೆಮ್ಮದೇವಿ ದೇವಸ್ಥಾನಕ್ಕೆ ಬಂದಿದ್ದ ಬಾಲಕನೊಬ್ಬ ತುಂಗಭದ್ರಾ ನದಿಯಲ್ಲಿ ನಾಪತ್ತೆಯಾಗಿದ್ದ. ಮಂಗಳವಾರ ಬೆಳಿಗ್ಗೆ ಬಾಲಕನ ಮೃತದೇಹ ಪತ್ತೆಯಾಗಿದೆ.

ಯಲಬುರ್ಗಾ ತಾಲ್ಲೂಕು ಕುದ್ರಿಕೊಟಿಗೆ ಗ್ರಾಮದ ಕನಕಪ್ಪ ಮಾದರ್ (17) ಮೃತ ಬಾಲಕ.

ಕುಟುಂಬದವರು, ಪೊಲೀಸ್, ಅಗ್ನಿಶಾಮಕ ಹಾಗೂ ತುರ್ತು ಸೇವೆಯ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ ಬಳಿಕ ಬಾಲಕನ ಮೃತದೇಹ ಸಿಕ್ಕಿದೆ. ಶವವನ್ನು ಪರೀಕ್ಷೆಗಾಗಿ ಮುನಿರಾಬಾದ್ ಸಮುದಾಯ ಆರೋಗ್ಯ ಕೇಂದ್ರಕ್ಕೆ ರವಾನಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT