ಭಾನುವಾರ, 15 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕುಷ್ಟಗಿ: ಧ್ವಜದ ಕಂಬದಿಂದ ಬಿದ್ದು ಬಾಲಕ ಸಾವು

ಕಳಮಳ್ಳಿ ತಾಂಡಾ ಸರ್ಕಾರಿ ಶಾಲೆಯಲ್ಲಿ ಘಟನೆ
Published : 14 ಆಗಸ್ಟ್ 2024, 16:22 IST
Last Updated : 14 ಆಗಸ್ಟ್ 2024, 16:22 IST
ಫಾಲೋ ಮಾಡಿ
Comments

ಕುಷ್ಟಗಿ: ಧ್ವಜದ ಕಂಬದ ಮೇಲಿನಿಂದ ಬಿದ್ದು ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಕಳಮಳ್ಳಿ ತಾಂಡಾದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ಸಂಜೆ ನಡೆದಿದೆ.

ಶಾಲೆಯಲ್ಲಿ 3ನೇ ತರಗತಿಯಲ್ಲಿ ಓದುತ್ತಿರುವ ಪ್ರಕಾಶ ಸೋಮನಾಥ ಚವ್ಹಾಣ (9) ಮೃತ ಬಾಲಕ ಎಂದು ಗುರುತಿಸಲಾಗಿದೆ.

ಘಟನೆ ನಂತರ ಇಲ್ಲಿಯ ಸರ್ಕಾರಿ ಆಸ್ಪತ್ರೆಗೆ ಕರೆತರಲಾಯಿತಾದರೂ ಮೊದಲೇ ಬಾಲಕ ಮೃತಪಟ್ಟಿದ್ದ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಘಟನೆ ನಡೆದಾಗ ಶಾಲೆಯಲ್ಲಿ ಯಾವ ಶಿಕ್ಷಕರೂ ಇರಲಿಲ್ಲ, ಧ್ವಜಾರೋಹಣಕ್ಕೆ ಅಗತ್ಯ ಸಿದ್ಧತೆ ನಡೆಸಿ ಮುಖ್ಯದ್ವಾರ ಬಂದ್‌ ಮಾಡಿ ಹೋಗಿದ್ದರು. ನಂತರ ಅಲ್ಲಿಗೆ ಬಂದ ಕೆಲ ಬಾಲಕರು ಕಾಂಪೌಂಡ್ ಹಾರಿ ಆಟಕ್ಕೆ ಹೋಗಿದ್ದರು. ಆಗ ಬಾಲಕ ಪ್ರಕಾಶ ಕಂಬ ಏರಿ ಆಯತಪ್ಪಿ ತಲೆ ಕೆಳಗಾಗಿ ಬಿದ್ದಿದ್ದರಿಂದ ಗಂಭೀರ ಗಾಯವಾಗಿತ್ತು ಎಂದು ಮೃತ ಬಾಲಕನ ಸಂಬಂಧಿ ಒಬ್ಬರು ಮಾಹಿತಿ ನೀಡಿದರು.

ಈ ಕುರಿತು ಮಾಹಿತಿ ನೀಡಿದ ತಾವರಗೇರಾ ಪೊಲೀಸ್‌ ಠಾಣೆ ಸಬ್‌ ಇನ್‌ಸ್ಪೆಕ್ಟರ್ ನಾಗರಾಜ ಕೋಟಗಿ, ಘಟನೆ ಕುರಿತು ಕೆಲವರು ಬೇರೆ ಬೇರೆ ರೀತಿಯಲ್ಲಿ ವಿವರಿಸುತ್ತಿದ್ದು ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ ಎಂದರು.

ತಂದೆ ತಾಯಿ ದುಡಿಯಲು ಗುಳೆ ಹೋಗಿದ್ದು ಬಾಲಕ ತನ್ನ ಅಜ್ಜಿಯೊಂದಿಗೆ ವಾಸಿಸುತ್ತಿದ್ದ ಎಂದು ತಿಳಿದಿದೆ. ತಾವರಗೇರಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT