ಶನಿವಾರ, ಅಕ್ಟೋಬರ್ 16, 2021
23 °C

ಸೊಸೆಯಂದಿರ ಬಾವಿಯಲ್ಲಿ ಈಜಲು ಹೋದ ಬಾಲಕ ನೀರು ಪಾಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಸಿದ್ದಾಪುರ (ಕಾರಟಗಿ): ಗ್ರಾಮದ ಪುರಾತನ, ಸೊಸೆಯಂದಿರ ಬಾವಿಯಲ್ಲಿ ಈಜಲು ಹೋದ ಬಾಲಕನೊಬ್ಬ ಸಾವನ್ನಪ್ಪಿದ್ದಾನೆ.

ಬಸವರಾಜ (17) ಮೃತಪಟ್ಟ ಬಾಲಕ. ಬಾಲಕ ಸ್ನೇಹಿತರೊಂದಿಗೆ ಈಜಲು ತೆರಳಿದ್ದ ಎನ್ನಲಾಗಿದೆ. ಆದರೆ, ಈಜಲಾಗದೆ ಬಾವಿಯಲ್ಲಿ ಮುಳುಗಿದ್ದಾನೆ. ಇದರಿಂದ ಗಾಬರಿಗೊಂಡ ಸ್ನೇಹಿತರು ಬಾಲಕನ ಮನೆಯವರಿಗೆ ವಿಷಯ ತಿಳಿಸಿದ್ದಾರೆ.

ಅಗ್ನಿ ಶಾಮಕ ಠಾಣೆ ಸಿಬ್ಬಂದಿ, ಸ್ಥಳೀಯ ಈಜುಗಾರರು ಕಾರ್ಯಾಚರಣೆ ನಡೆಸಿದರು. ಬಾಲಕನ ಕಳೆಬರ ನೀರಿ ನಿಂದ ಹೊರತೆಗೆಯಲು ವಿಫಲರಾದರು.

ಬಳಿಕ ತಾಲ್ಲೂಕಿನ ಮೈಲಾಪುರ ಗ್ರಾಮದ ನಿವಾಸಿ ಚನ್ನಬಸಪ್ಪ ಹಡಪದ ಎಂಬ ನುರಿತ ಈಜುಗಾರ ಬಾಲಕನ ದೇಹವನ್ನು ನೀರಿನಿಂದ ಹೊರತರವಲ್ಲಿ ಯಶಸ್ವಿಯಾದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.