ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೋಷಕರಿಗೆ ಕೀರ್ತಿ ತನ್ನಿ: ಶಿವರಾಮಗೌಡ

Last Updated 23 ಸೆಪ್ಟೆಂಬರ್ 2022, 15:36 IST
ಅಕ್ಷರ ಗಾತ್ರ

ಕೊಪ್ಪಳ: ‘ಎಸ್‍ಎಸ್‍ಎಲ್‍ಸಿ ಹಾಗೂ ಪಿಯುಸಿಯಲ್ಲಿ ಉತ್ತಮ ಫಲಿತಾಂಶ ಪಡೆದ ಮಕ್ಕಳಿಗೆ ಪ್ರತಿಭಾ ಪುರಸ್ಕಾರದಮೂಲಕಗೌರವಿಸುತ್ತಿರುವುದುಹೆಮ್ಮೆಯವಿಷಯ’ಎಂದು ಮಾಜಿ ಸಂಸದ ಶಿವರಾಮಗೌಡ ಹೇಳಿದರು.

ನಗರದ ಪಂಚಮಸಾಲಿ ಸಮುದಾಯ ಭವನದಲ್ಲಿ ಶುಕ್ರವಾರ ನಡೆದ ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜದ ಕೊಪ್ಪಳ ತಾಲ್ಲೂಕು ಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ‘ಮಕ್ಕಳು ಯಾವುದಕ್ಕೂ ಧೃತಿಗೆಡಬಾರದು. ಸಮಾಜ ನಿಮ್ಮ ಹಿಂದೆ ಇದೆ. ಉತ್ತಮ ಅಂಕಗಳನ್ನು ಪಡೆದು ತಂದೆ ತಾಯಿ ಹಾಗೂ ಕಲಿಸಿದ ಗುರುಗಳಿಗೆ ಕೀರ್ತಿ ತರಬೇಕು’ ಎಂದರು.

‘ಆಳುವ ಎಲ್ಲಾ ಪಕ್ಷಗಳು ಪಂಚಮಸಾಲಿ ಸಮಾಜದವರಿಗೆ ಮೂಗಿಗೆ ತುಪ್ಪ ಸವರುವ ಕೆಲಸ ಮಾಡುತ್ತಿದ್ದು, 2 ಎ ಮೀಸಲಾತಿ ನೀಡಲು ಯಾವ ಸರ್ಕಾರಗಳು ಪಂಚಮಸಾಲಿ ಸಮಾಜದ ಜೊತೆಯಿಲ್ಲ. ಇದಕ್ಕಾಗಿ ಬೀದಿಯಲ್ಲಿ ಹೋರಾಟ, ಪಾದಯಾತ್ರೆ, ಕಾನೂನು ಮೂಲಕ ಹೋರಾಟ ಹೀಗೆ ನಿರಂತರ ಪ್ರಯತ್ನ ನಡೆದಿದೆ’ ಎಂದರು.

ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜದ ಕಾರ್ಯಾಧ್ಯಕ್ಷ ಸೋಮನಗೌಡ ಪಾಟೀಲ, ಕೊಪ್ಪಳ ತಾಲ್ಲೂಕು ಘಟಕದ ಅಧ್ಯಕ್ಷ ಕರಿಯಪ್ಪ ಮೇಟಿ, ಜಿಲ್ಲಾ ಘಟಕದ ಅಧ್ಯಕ್ಷ ಬಸನಗೌಡ ತೊಂಡಿಹಾಳ, ಪ್ರಧಾನ ಕಾರ್ಯದರ್ಶಿ ದೇವರಾಜ ಹಾಲಸಮುದ್ರ, ತಾಲ್ಲೂಕು ಮಹಿಳಾ ಘಟಕದ ಅಧ್ಯಕ್ಷೆ ಪ್ರತಿಮಾ ಪಟ್ಟಣಶೆಟ್ಟಿ, ಸಮಾಜದ ಮುಖಂಡರಾದ ಎಲ್.ಎಫ್ ಪಾಟೀಲ, ವೀರಬಸಪ್ಪ ಪಟ್ಟಣಶೆಟ್ಟಿ, ಎಂ.ವಿ.ಪಾಟೀಲ, ಬಸಲಿಂಗಪ್ಪ ಭೂತೆ, ಗವಿಸಿದ್ದಪ್ಪ ಕರಡಿ, ಲತಾ ಗವಿಸಿದ್ದಪ್ಪ ಚಿನ್ನೂರು, ವೀಣಾ ಹೊಳಗುಂದಿ, ಸಂಗಮೇಶ ಬಾದವಾಡಗಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT