ಮಂಗಳವಾರ, 20 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಪ್ಪಳ | ರೈಲ್ವೆ ಗೇಟ್‌ಗೆ ಬಸ್ ಡಿಕ್ಕಿ; ಹಲವರಿಗೆ ಗಾಯ

Published 27 ನವೆಂಬರ್ 2023, 7:41 IST
Last Updated 27 ನವೆಂಬರ್ 2023, 7:41 IST
ಅಕ್ಷರ ಗಾತ್ರ

ಕೊಪ್ಪಳ: ನಗರದ ಹೊರ ವಲಯದಲ್ಲಿರುವ ರೈಲ್ವೆ ಗೇಟ್ ಗೆ ಸೋಮವಾರ ಸರ್ಕಾರಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಹಲವು ಪ್ರಯಾಣಿಕರಿಗೆ ಗಾಯಗಳಾಗಿವೆ.

ಚಾಲಕನ ನಿಯಂತ್ರಣ ತಪ್ಪಿ ಬಸ್ ಡಿಕ್ಕಿ ಹೊಡೆದಿದೆ.

ಗಂಗಾವತಿಯಿಂದ ಕೊಪ್ಪಳ ನಗರಕ್ಕೆ ಬರುವಾಗ ಈ ಘಟನೆ ನಡೆದಿದೆ.

ಬಸ್ ನಲ್ಲಿ ಪ್ರಯಾಣಿಸುತ್ತಿದ್ದ 15ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಕೊಪ್ಪಳ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಡಿಕ್ಕಿ ಹೊಡೆದ ರಭಸಕ್ಕೆ ಬಸ್‌ ಮುಂಭಾಗದ ಪ್ಲಾಸ್ಟಿಕ್ ಗಾಜು ಪುಡಿ ಪುಡಿಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT