ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಪ್ಪಳ| ಕ್ಯಾನ್ಸರ್ ದಿನಾಚರಣೆ : ಜಾಗೃತಿ ಜಾಥಾ

Last Updated 12 ಫೆಬ್ರುವರಿ 2023, 6:11 IST
ಅಕ್ಷರ ಗಾತ್ರ

ಕೊಪ್ಪಳ: ಕೊಪ್ಪಳ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಸಮುದಾಯ ವೈದ್ಯಶಾಸ್ತ್ರ ವಿಭಾಗದ ವತಿಯಿಂದ ಇತ್ತೀಚೆಗೆ ನಗರದ ಆರೋಗ್ಯ ಕೇಂದ್ರ ಹಾಗೂ ಇರಕಲ್ಲಗಡದ ಗ್ರಾಮೀಣ ಆರೋಗ್ಯ ತರಬೇತಿ ಕೇಂದ್ರದಲ್ಲಿ ವಿಶ್ವ ಕ್ಯಾನ್ಸರ್ ದಿನದ ಕುರಿತು ಕಾರ್ಯಕ್ರಮ ನಡೆಯಿತು.

ವೈದ್ಯಕೀಯ, ಅರೆವೈದ್ಯಕೀಯ ವಿದ್ಯಾರ್ಥಿಗಳು ಹಾಗೂ ನರ್ಸಿಂಗ್ ವಿದ್ಯಾರ್ಥಿಗಳು, ನಗರದ ಜಿಲ್ಲಾ ಬೋಧಕ ಆಸ್ಪತ್ರೆಯಿಂದ ಅಶೋಕ ವೃತ್ತದವರಗೆ ಜಾಥಾ ಕೈಗೊಂಡು ಘೋಷಣೆ ಕೂಗುತ್ತಾ ಸಾರ್ವಜನಿಕರಲ್ಲಿ ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸಿದರು.

ಕ್ಯಾನ್ಸರ್‌ನಿಂದಾಗಿ ಪುರುಷರಲ್ಲಿ ಕಂಡುಬರುವ ಬಾಯಿ ಕ್ಯಾನ್ಸರ್, ಶ್ವಾಸಕೋಶ, ಅನ್ನನಾಳ, ಜಠರ ಹಾಗೂ ಮಹಿಳೆಯರಲ್ಲಿ ಕಂಡುಬರುವ ಗರ್ಭಕೊರಳಿನ ಕ್ಯಾನ್ಸರ್, ಸ್ಥನ ಕ್ಯಾನ್ಸರ್, ಬಾಯಿ ಕ್ಯಾನ್ಸರ್, ಥೈರಾಯ್ಡ್ ಕ್ಯಾನ್ಸರ್‌ಗಳ ಲಕ್ಷಣ ಮತ್ತು ತಡೆಗಟ್ಟುವ ಕ್ರಮಗಳ ಬಗ್ಗೆ ಜಾಥಾದಲ್ಲಿ ಅರಿವು ಮೂಡಿಸಲಾಯಿತು.

ಕಿಮ್ಸ್‌ ನಿರ್ದೇಶಕ ಡಾ. ವಿಜಯನಾಥ ಇಟಗಿ, ಪ‍್ರಾಚಾರ್ಯ ಡಾ. ರಾಘವೇಂದ್ರ ಬಾಬು, ವೈದ್ಯಕೀಯ ಅಧೀಕ್ಷಕ ಡಾ ಕೆ.ವೇಣುಗೋಪಾಲ, ಸಮುದಾಯ ವೈದ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಮಲ್ಲಿಕಾರ್ಜುನ ಬಿರಾದಾರ, ಡಾ ಎಲ್.ಅನಿಲ್‌ ಕುಮಾರ, ಸಿಬ್ಬಂದಿ ಡಾ. ಗೀತಾ ಹಂಚಿನಮನಿ, ಡಾ. ಬೆಂಗಾಲಿ ಅಶ್ವಿನಿ, ಡಾ. ವಿನಾಯಕ, ಮಲ್ಲಪ್ಪ ಬಿರಾದಾರ, ಸಂಗಪ್ಪ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT