ಕೊಪ್ಪಳ: ಇಲ್ಲಿನ ಲೋಕೋಪಯೋಗಿ ಇಲಾಖೆಯ ವಿಭಾಗೀಯ ಕಚೇರಿಗೆ ತೆರಳಿ ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್ ಎಸ್) ಪಕ್ಷದ ಕಾರ್ಯಕರ್ತರು ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಮೂವರನ್ನು ವಶಕ್ಕೆ ಪಡೆಯಲಾಗಿದೆ.
ಶರಣಪ್ಪ, ಚಂದ್ರಶೇಖರ ಹಾಗೂ ವೆಂಕಟೇಶ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕಾರ್ಯಕರ್ತರು ಕೆಲಸದ ಅವಧಿಯಲ್ಲಿ ತೊಂದರೆ ನೀಡಿದ್ದಾರೆ ಎಂದು ಇಲಾಖೆಯ ಅಧಿಕಾರಿ ಶಾಮಣ್ಣ ಎಂಬುವರು ದೂರು ನೀಡಿದ್ದು, ನಗರಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.