ಕೊಪ್ಪಳ: ತಾಲ್ಲೂಕಿನ ಮಂಗಳಾಪುರದ ಜನರಿಗೆ ಸಮಸ್ಯೆಯಾಗಿದ್ದ ಸ್ಮಶಾನ ಜಾಗದ ಕೊರತೆಯನ್ನು ಜಿಲ್ಲಾಡಳಿತ ನೀಗಿಸಿದ್ದು, 20 ಗಂಟೆ ಸರ್ಕಾರಿ ಭೂಮಿಯನ್ನು ಸ್ಮಶಾನಕ್ಕಾಗಿ ಮಂಜೂರು ಮಾಡಿ ಜಿಲ್ಲಾಧಿಕಾರಿ ಸುರೇಶ ಇಟ್ನಾಳ ಅವರು ಶುಕ್ರವಾರ ಆದೇಶ ಹೊರಡಿಸಿದ್ದಾರೆ.

ಗ್ರಾಮದ ಜನರಿಗೆ ಸ್ಮಶಾನ ಜಾಗದ ಕೊರತೆಯಿದ್ದ ಕಾರಣ ಗ್ರಾಮಸ್ಥರು ಶಾಲೆಯ ಮುಂಭಾಗದಲ್ಲಿಯೇ ಅಂತ್ಯಕ್ರಿಯೆಗೆ ಸಿದ್ಧತೆ ಮಾಡಿಕೊಂಡು ಆಡಳಿತದ ವಿರುದ್ಧ ಇತ್ತೀಚೆಗೆ ಆಕ್ರೋಶ ವ್ಯಕ್ತಪಡಿಸಿದ್ದರು. ಆಗ ಅಧಿಕಾರಿಗಳು ಗ್ರಾಮಸ್ಥರ ಜೊತೆ ಚರ್ಚಿಸಿದ ಬಳಿಕ ಸರ್ಕಾರಿ ಜಮೀನು ರುದ್ರಭೂಮಿಗಾಗಿ ಮೀಸಲಿಟ್ಟು ಆದೇಶ ಹೊರಡಿಸಿದ್ದಾರೆ.

ಈಗಿರುವ ಜಮೀನು ಮಂಗಳಾಪುರ ಗ್ರಾಮದಿಂದ ಒಂದು ಕಿ.ಮೀ. ದೂರದಲ್ಲಿದ್ದು, ರಸ್ತೆ ಸಂಪರ್ಕ ಇರುವುದರಿಂದ ಯಾವುದೇ ತೊಂದರೆಯಾಗುವುದಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.