ಮಂಗಳವಾರ, ಸೆಪ್ಟೆಂಬರ್ 28, 2021
21 °C

ಸಾಣಾಪುರ: ಕುಡಿಯುವ ನೀರಿನ‌ ಘಟಕ ಪರಿಶೀಲನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಗಂಗಾವತಿ: ತಾಲ್ಲೂಕಿನ ಸಾಣಾಪುರ ಗ್ರಾಮದ ಕೆರೆಯಿಂದ ಸುತ್ತಮುತ್ತಲಿನ ಗ್ರಾಮಗಳಿಗೆ ಸರಬರಾಜು ಆಗುವ ಕುಡಿಯುವ ನೀರಿನ ಘಟಕಕ್ಕೆ ಜಿ.ಪಂ ಸಿಇಒ ಫೌಜಿಯಾ ತರುನ್ನುಮ್ ಶನಿವಾರ ಭೇಟಿ ನೀಡಿ ಪರಿಶೀಲನೆ ಮಾಡಿದರು.

ನಂತರ ಮಾತನಾಡಿದ ಅವರು, ‘ನೀರಿನ ಘಟಕದ ಸುತ್ತುಮುತ್ತ ಸ್ವಚ್ಛತೆಯನ್ನು ಕಾಪಾಡಬೇಕು. ಜೊತೆಗೆ ನಿತ್ಯ ನೀರು ಫಿಲ್ಟರ್ ಆಗುವ ಕುರಿತು ಪರಿಶೀಲನೆ ನಡೆಸಬೇಕು. ನೀರಿನ ಟ್ಯಾಂಕ್‌ಗಳನ್ನು 15 ದಿನಗಳಿಗೊಮ್ಮೆ ಸ್ವಚ್ಛಗೊಳಿಸಬೇಕು’ ಎಂದು ನೀರಾವರಿ ಇಲಾಖೆಗೆ ಸೂಚಿಸಿದರು. ತಾ.ಪಂ ಇಒ ಡಾ.ಡಿ.ಮೋಹನ್, ಸಾಣಾಪುರ ಗ್ರಾ.ಪಂ ಸಿಬ್ಬಂದಿ ವೆಂಕಟೇಶ್, ನಿಸಾರ್ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.