ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಪ್ಪಳ | ಸಿಇಟಿ ಪರೀಕ್ಷೆ: ಇಂದಿನಿಂದ ನಿಷೇಧಾಜ್ಞೆ

Published 19 ಮೇ 2023, 12:49 IST
Last Updated 19 ಮೇ 2023, 12:49 IST
ಅಕ್ಷರ ಗಾತ್ರ

ಕೊಪ್ಪಳ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಮೇ 20 ಮತ್ತು 21 ರಂದು ಸಿಇಟಿ ಪರೀಕ್ಷೆಗಳು ಆಯೋಜನೆಯಾಗಿದ್ದು, ಸುಗಮ ಹಾಗೂ ಶಾಂತಿಯುತವಾಗಿ ನಡೆಸುವ ಉದ್ದೇಶದಿಂದ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಎಂ.ಸುಂದರೇಶ ಬಾಬು ಆದೇಶ ಹೊರಡಿಸಿದ್ದಾರೆ.

ಪರೀಕ್ಷೆಗಳು  ಜಿಲ್ಲೆಯ 11 ಕೇಂದ್ರಗಳಲ್ಲಿ ನಡೆಯಲಿದ್ದು, ಕೇಂದ್ರಗಳಲ್ಲಿ ಯಾವುದೇ ರೀತಿಯ ಅಕ್ರಮ, ಅವ್ಯವಹಾರ ನಡೆಯದಂತೆ ತಡೆಗಟ್ಟಲು ಸಿ.ಆರ್.ಪಿ.ಸಿ 1973 ಕಲಂ 144ರನ್ವಯ ಪರೀಕ್ಷಾ ಕೇಂದ್ರಗಳ ಸುತ್ತಲೂ ನಿಷೇಧಾಜ್ಞೆ ಹೇರಲಾಗಿದೆ.

ಕೊಪ್ಪಳದ ಗವಿಸಿದ್ದೇಶ್ವರ ಕಲಾ ವಾಣಿಜ್ಯ ಮತ್ತು ವಿಜ್ಞಾನ ಪಿಯು ಕಾಲೇಜು, ಸರ್ಕಾರಿ ಬಾಲಕೀಯರ ಪದವಿಪೂರ್ವ ಕಾಲೇಜು, ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜು, ಭಾಗ್ಯನಗರದ ಪದವಿಪೂರ್ವ ಕಾಲೇಜು, ಲಯನ್ಸ್ ಸ್ವಾಮಿ ವಿವೇಕಾನಂದ ಪಿಯು ಕಾಲೇಜು, ಕುಷ್ಟಗಿ ರಸ್ತೆಯ ಕಾಳಿದಾಸ ಪಿಯು ಕಾಲೇಜು, ಭಾಗ್ಯನಗರದ ನವಚೇತನ ಪಿಯು ವಿಜ್ಞಾನ ವಸತಿ ಕಾಲೇಜು, ಕಿಡದಾಳ ಗ್ರಾಮದಲ್ಲಿರುವ ಶಾರದಾ ಪಿಯು ಕಾಲೇಜು, ಭಾಗ್ಯನಗರದ ಜ್ಞಾನಬಂಧು ಪಿಯು ಕಾಲೇಜು, ಕೊಪ್ಪಳದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಪರೀಕ್ಷೆಗಳು ಜರುಗಲಿವೆ. ಈ ನಿಷೇಧಾಜ್ಞೆ ಮದುವೆ, ಶವ ಸಂಸ್ಕಾರ ಹಾಗೂ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳಿಗೆ ಅನ್ವಯವಾಗುವದಿಲ್ಲ.

ಲೆಕ್ಕ ಸಮನ್ವಯ ಮಾಡಿಕೊಳ್ಳಲು ಸೂಚನೆ

ಕೊಪ್ಪಳ: ವಿಧಾನಸಭಾ ಚುನಾವಣೆ ಮುಗಿದಿರುವ ಹಿನ್ನೆಲೆಯಲ್ಲಿ ಕೊಪ್ಪಳ ಕ್ಷೇತ್ರದ ಅಭ್ಯರ್ಥಿಗಳು ಲೆಕ್ಕ ಸಮನ್ವಯ ಮಾಡಿಕೊಳ್ಳುವಂತೆ ಕ್ಷೇತ್ರ ಚುನಾವಣಾಧಿಕಾರಿ ಕೋರಿದ್ದಾರೆ.

ಸ್ಪರ್ಧಾಕಣದಲ್ಲಿದ್ದ ಅಭ್ಯರ್ಥಿಗಳು ಫಲಿತಾಂಶ ಘೋಷಣೆಯ ದಿನಾಂಕದ 26ನೇ ದಿನದಂದು ಚುನಾವಣಾ ವೆಚ್ಚದ ಅಂತಿಮ ಲೆಕ್ಕಪತ್ರಗಳನ್ನು ನಿಗದಿತ ನಮೂನೆಗಳಲ್ಲಿ ಅಫಿಡವಿಟ್‌ ಸಲ್ಲಿಸಬೇಕು. ಜೂನ್‌ 8ರಂದು ನಡೆಯುವ ಅಂತಿಮ ಲೆಕ್ಕಪತ್ರ ಸಮನ್ವಯ ಸಭೆಯಲ್ಲಿ ಅಭ್ಯರ್ಥಿಯಾಗಲಿ ಅಥವಾ ಅಧಿಕೃತ ವೆಚ್ಚದ ಏಜೆಂಟರ ಮೂಲಕ ಸಭೆಗೆ ಹಾಜರಾಗಬೇಕು ಎಂದು ಕೋರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT