ಮಂಗಳವಾರ, 17 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕೊಪ್ಪಳ | ಕಟ್ಟಡ ಕಾರ್ಮಿಕರ ಮಕ್ಕಳಿಗೆ ವಂಚನೆ; ಆರೋಪ

Published : 9 ನವೆಂಬರ್ 2023, 16:35 IST
Last Updated : 9 ನವೆಂಬರ್ 2023, 16:35 IST
ಫಾಲೋ ಮಾಡಿ
Comments

ಕೊಪ್ಪಳ: ‘ಶೈಕ್ಷಣಿಕ ಧನಸಹಾಯ ಶೇ 70ರಿಂದ 90ರಷ್ಟು ಕಡಿತಗೊಳಿಸಿ ಅಧಿಸೂಚನೆ ಹೊರಡಿಸುವ ಮೂಲಕ ರಾಜ್ಯ ಸರ್ಕಾರ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕವಾಗಿ ವಂಚಿಸುತ್ತಿದೆ’ ಎಂದು ರಾಜ್ಯ ಕಟ್ಟಡ ಕಟ್ಟುವ ಮತ್ತು ಕಲ್ಲು ಒಡೆಯುವ ಕ್ವಾರಿ ಕಾರ್ಮಿಕರ ಸಂಘದ ಜಿಲ್ಲಾ ಸಂಚಾಲಕ ಎಸ್.ಎ.ಗಫಾರ್ ಆರೋಪಿಸಿದರು.

ಭಾಗ್ಯನಗರದ ಮರಿಯಮ್ಮ ದೇವಿ ಕಟ್ಟಡ ಕಾರ್ಮಿಕರ ಮತ್ತು ಇತರೆ ಕಾರ್ಮಿಕರ ಹಿತರಕ್ಷಣಾ ಸಂಘ (ಎಐಟಿಯುಸಿ ಸಂಯೋಜಿತ) ಕಾರ್ಯಾಲಯದಲ್ಲಿ ಗುರುವಾರ ನಡೆದ ಸಂಘದ ಜಿಲ್ಲಾ ಘಟಕದ ನೇತೃತ್ವದಲ್ಲಿ ವಿವಿಧ ಘಟಕಗಳ ಪದಾಧಿಕಾರಿಗಳ ಪ್ರತಿಭಟನಾ ಸಭೆಯಲ್ಲಿ ಅವರು ಮಾತನಾಡಿದರು.

‘ಕಟ್ಟಡ ನಿರ್ಮಾಣದಲ್ಲಿ ತೊಡಗಿರುವವರು ದಲಿತ, ಹಿಂದುಳಿದ ಅಲ್ಪಸಂಖ್ಯಾತ ಸಮುದಾಯದವರೇ ಹೆಚ್ಚು. ಹಿಂದಿನ ಸರ್ಕಾರ ಕಟ್ಟಡ ಕಾರ್ಮಿಕರ ವಿವಿಧ ಕಿಟ್‌ಗಳ ಹೆಸರಿನಲ್ಲಿ ಬಹುಕೋಟಿ ಹಗರಣ ನಡೆಸಿದ್ದರಿಂದ ಕಾರ್ಮಿಕರು ಕಾಂಗ್ರೆಸ್‌ ಪಕ್ಷಕ್ಕೆ ಬೆಂಬಲ ನೀಡಿ ಅಧಿಕಾರ ದೊರಕಿಸಿಕೊಟ್ಟಿದ್ದಾರೆ. ಈ ಸರ್ಕಾರವೂ ನಮ್ಮನ್ನು ಕಡೆಗಣಿಸುತ್ತಿದೆ’ ಎಂದರು.  

ಸಂಘದ ಜಿಲ್ಲಾ ಸಂಘಟನಾ ಸಂಚಾಲಕ ತುಕಾರಾಮ್ ಬಿ.ಪಾತ್ರೋಟಿ, ಮರಿಯಮ್ಮ ದೇವಿ ಕಟ್ಟಡ ಕಾರ್ಮಿಕರ ಮತ್ತು ಇತರೆ ಕಾರ್ಮಿಕರ ಹಿತರಕ್ಷಣಾ ಸಂಘದ ಅಧ್ಯಕ್ಷ ಮೌಲಾ ಸಾಬ್ ಕಪಾಲಿ, ಮುಖಂಡರಾದ ಅಶೋಕ್ ಬಾವಿಮನಿ. ಜಗದೀಶ ಕಟ್ಟಿಮನಿ, ತಿಮ್ಮಣ್ಣ ಕಟ್ಟಿಮನಿ, ಮಂಜುನಾಥ ವಡ್ಡರ್, ಶೇಖಪ್ಪ ವಡ್ಡರ, ಪರಶುರಾಮ, ಹುಲುಗಪ್ಪ ಅಕ್ಕಿ ರೊಟ್ಟಿ, ಎ.ಎಲ್. ತಿಮ್ಮಣ್ಣ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT