ಮಂಗಳವಾರ, ಡಿಸೆಂಬರ್ 1, 2020
26 °C

ಯುವಕನ ಮನೆಗೆ ಪರಣ್ಣ ಭೇಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಗಂಗಾವತಿ: ತಾಲ್ಲೂಕಿನ ಆನೆಗೊಂದಿಯ ಆದಿಶಕ್ತಿ ದುರ್ಗಾದೇವಿ ದೇವಸ್ಥಾನದಲ್ಲಿ ಈಚೆಗೆ ಚಿರತೆ ದಾಳಿಯಿಂದ ಮೃತಪಟ್ಟ ಹುಲುಗೇಶ ಅವರ ಮನೆಗೆ ಶಾಸಕ ಪರಣ್ಣ ಮುನವಳ್ಳಿ ಸೋಮವಾರ ಭೇಟಿ ನೀಡಿ ಸಾಂತ್ವನ ಹೇಳಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,‘ಮೃತ ಯುವಕನ ತಮ್ಮನಿಗೆ ದೇವಸ್ಥಾನದಲ್ಲಿ ಕೆಲಸ ನೀಡಲಾಗುವುದು. ಈಗಾಗಲೇ ಅರಣ್ಯ ಸಚಿವರ ಜತೆಗೆ ಮಾತನಾಡಿದ್ದೇನೆ. ಸರ್ಕಾರ ಪರಿಹಾರ ನೀಡಲಿದೆ’ ಎಂದರು.

ವಲಯ ಅರಣ್ಯಾಧಿಕಾರಿ ಶಿವರಾಜ್‌ ಮೇಟಿ, ಬಿಜೆಪಿ ಗ್ರಾಮೀಣ ಮಂಡಲದ ಅಧ್ಯಕ್ಷ ಚನ್ನಪ್ಪ ಮಳಿಗಿ, ನಗರಸಭೆ ಸದಸ್ಯ ಪರಶುರಾಮ್ ಮಡ್ಡೆರ್, ಪ್ರಮುಖರಾದ ಈ.ಧನರಾಜ, ರಾಘವೇಂದ್ರ, ಬೋಗೇಶ ಹಾಗೂ ಶಿವು ಅರಕೇರಿ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.