ಗಂಗಾವತಿ: ಕೂಲಿಕಾರ್ಮಿಕರ ಸಮಸ್ಯೆ, ಅಧಿಕ ಕೂಲಿ ಹಣ ಪಾವತಿ ಮುಂತಾದವುಗಳಿಂದ ತಪ್ಪಿಸಿಕೊಳ್ಳಲು ರೈತರು ತಾವು ಬೆಳೆದ ಭತ್ತದ ಬೆಳೆಗೆ ರಾಸಾಯನಿಕ ಸಿಂಪಡಿಸಲು ಡ್ರೋನ್ ಬಳಸುತ್ತಿದ್ದಾರೆ.

ತಾಲ್ಲೂಕಿನ ಜಂಗಮರ ಕಲ್ಗುಡಿ, ಹೊಸ್ಕೇರಾ, ಬೂದಗುಂಪಾ, ಶ್ರೀರಾಮನಗರ ಸೇರಿದಂತೆ ನಾನಾ ಭಾಗಗಳಲ್ಲಿ ರೈತರು ಭತ್ತದ ಬೆಳೆಗೆ ಕ್ರಿಮಿನಾಶಕ ಸಿಂಪಡಿಸಲು ಡ್ರೋನ್ ಮೊರೆ ಹೋಗಿದ್ದಾರೆ. ಇದರಿಂದ ಕೂಲಿಕಾರ್ಮಿಕರಿಗಾಗಿ ಕಾಯುವಂತಹ ಪ್ರಮೇಯ ಬರುವುದಿಲ್ಲ ಮತ್ತು ಹೆಚ್ಚಿನ ಕೂಲಿ ಹಣ ನೀಡುವಂತಹ ಪ್ರಸಂಗವೂ ಬರುವುದಿಲ್ಲ ಎನ್ನುತ್ತಾರೆ ಅವರು.

ಜಂಗಮರ ಕಲ್ಗುಡಿ ಗ್ರಾಮದಲ್ಲಿ ಫೆಬ್ರುವರಿ 16ರಂದು 10 ಎಕರೆ ಜಮೀನಿನಲ್ಲಿ ಬೆಳೆದಿರುವ ಭತ್ತಕ್ಕೆ ಪ್ರಾಯೋಗಿಕವಾಗಿ ಡ್ರೋನ್ ಮೂಲಕ ರಾಸಾಯನಿಕ ಸಿಂಪಡಿಸಲಾಯಿತು. ಹಂತ ಹಂತವಾಗಿ ಇತರೆ ಗ್ರಾಮಗಳಿಗೆ ಇದು ವಿಸ್ತರಿಸಲಿದೆ.

ಬಾಡಿಗೆ ಡ್ರೋಣ್ ಬಳಕೆ : ‘ತಮಿಳುನಾಡಿನಿಂದ ಡ್ರೋನ್ ತರಿಸಲಾಗಿದ್ದು, ಬಾಡಿಗೆ ರೂಪದಲ್ಲಿ ಹಣ ಪಾವತಿಸಲಾಗುತ್ತದೆ. ಪ್ರತಿ ಎಕರೆಗೆ ರಾಸಾಯನಿಕ ಸಿಂಪಡಿಸಲು ₹ 600 ದರ ನಿಗದಿಪಡಿಸಲಾಗಿದೆ. ಬಾಡಿಗೆ ತಂದಿರುವ ಕಂಪನಿಯವರೇ ಡ್ರೋನ್ ನಿರ್ವಹಿಸುತ್ತಾರೆ. ಇದರಿಂದ ಹಣ ಮತ್ತು ಸಮಯದ ಉಳಿತಾಯವಾಗುತ್ತದೆ’ ಎಂದು ರೈತರು ತಿಳಿಸಿದರು.

‘ಪ್ರತಿ ಒಂದು ನಿಮಿಷಕ್ಕೆ 5 ರಿಂದ 6 ಎಕರೆ ಜಮೀನಿಗೆ ರಾಸಾಯನಿಕ ಸಿಂಪಡಿಸುವ ಸಾಮಾರ್ಥ್ಯ ಡ್ರೋನ್ ಹೊಂದಿವೆ. ಒಂದೇ ದಿನಕ್ಕೆ 50 ಎಕರೆ ಜಮೀನು ಸಿಂಪಡಿಸಬಹುದು’ ಎಂದು ಜಂಗಮರ ಕಲ್ಗುಡಿ ಗ್ರಾಮದ ರೈತ ಪ್ರಸಾದ್ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.