ಬುಧವಾರ, ಸೆಪ್ಟೆಂಬರ್ 22, 2021
21 °C
ಕಿಸಾನ್‌ ಗೋಷ್ಠಿ ಕಾರ್ಯಕ್ರಮದಲ್ಲಿ ಮಹಿಳಾ ಸಂಘಗಳಿಗೆ ಚೆಕ್‌ ವಿತರಣೆ

ಕೃಷಿ ಇಲಾಖೆ ಯೋಜನೆ ಸದ್ಬಳಕೆಗೆ ಸಲಹೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕುಷ್ಟಗಿ: ಸರ್ಕಾರದ ಕೃಷಿ ಮತ್ತಿತರೆ ಇಲಾಖೆಗಳ ಆರ್ಥಿಕ ನೆರವಿನೊಂದಿಗೆ ಸಂಘಟನಾತ್ಮಕ ಚಟುವಟಿಕಗಳನ್ನು ನಡೆಸುವುದರಿಂದ ಮಹಿಳೆಯರ ಆರ್ಥಿಕ ಸಬಲೀಕರಣ ಸಾಧ್ಯವಾಗುತ್ತದೆ ಎಂದು ಶಾಸಕ ಅಮರೇಗೌಡ ಬಯ್ಯಾಪುರ ಹೇಳಿದರು.

ಕೃಷಿ ಇಲಾಖೆ ಹಮ್ಮಿಕೊಂಡಿದ್ದ ಕಿಸಾನ್‌ ಗೋಷ್ಠಿ ಕಾರ್ಯಕ್ರಮದಲ್ಲಿ ಮಹಿಳಾ ಸಂಘಗಳಿಗೆ ₹10 ಸಾವಿರ ಮೊತ್ತದ ಚೆಕ್‌ ಹಸ್ತಾಂತರಿಸಿ ಮಾತನಾಡಿದ ಅವರು,‘ ಕೃಷಿ ಕ್ಷೇತ್ರದಲ್ಲಿ ಮಹಿಳೆಯರಿಗೆ ವಿಪುಲ ಅವಕಾಶಗಳಿವೆ, ವಿವಿಧ ಯೋಜನೆಗಳ ಮೂಲಕ ಸರ್ಕಾರದ ಹೆಚ್ಚಿನ ಪ್ರೋತ್ಸಾಹವೂ ಇದ್ದು, ಸದ್ಬಳಕೆ ಮಾಡಿಕೊಳ್ಳಬೇಕು. ಕೇವಲ ಸಹಾಯಧನ, ಸರ್ಕಾರದ ನೆರವು ಪಡೆಯಲು ಮಾತ್ರ ಸಂಘಗಳು ಇರಬಾರದು ಎಂದರು.

ಹಿರೇಬನ್ನಿಗೋಳದ ಪ್ರಗತಿಪರ ರೈತ ಶರಣಪ್ಪ ಭತ್ತದ ಮಾತನಾಡಿ, ‘ಕೃಷಿ ಇಲಾಖೆಯ ಸಲಹೆಗಳನ್ನು ಪಾಲಿಸಿ ಸಮಗ್ರ ಕೃಷಿ ಕೈಗೊಂಡಿದ್ದರಿಂದ ತಾವು ಆರ್ಥಿಕವಾಗಿ ಸ್ವಾವಲಂಬನೆ ಹೊಂದಲು ಸಾಧ್ಯವಾಯಿತು’ ಎಂದರು.

ರೈತ ಶಿವನಗೌಡ ಪಾಟೀಲ ಮಾತನಾಡಿ,‘ಬೆಳೆಯಲ್ಲಿ ವೈವಿಧ್ಯತೆ ಇರಬೇಕು. ಕೇವಲ ಒಂದೇ ಬೆಳೆಯನ್ನು ಬೆಳೆಯದೆ ಸಿರಿಧಾನ್ಯಗಳತ್ತ ರೈತರು ಗಮನಹರಿಸಬೇಕು’ ಎಂದರು. ಹೂಲಗೇರಿಯ ದುರ್ಗಾದೇವಿ ಮಹಿಳಾ ಸಂಘದ ಸದಸ್ಯ ಲಕ್ಷ್ಮಿ ಸಂಘ ಬೆಳೆದು ಬಂದ ರೀತಿ, ಬೆಳೆ ವಿಮೆ ಯೋಜನೆಯಲ್ಲಿ ರೈತರ ಪಾಲ್ಗೊಳ್ಳುವಿಕೆ ಮತ್ತು ಯೋಜನೆಗಳ ಪ್ರಯೋಜನ, ಮಕ್ಕಳ ಶೈಕ್ಷಣಿಕ ಬೆಳವಣಿಗೆ ಕುರಿತು ಅನುಭವ ಹಂಚಿಕೊಂಡರು.ಕೃಷಿ ಸಹಾಯಕ ನಿರ್ದೇಶಕ ವಿ.ತಿಪ್ಪೇಸ್ವಾಮಿ ಕೃಷಿ ಇಲಾಖೆಯ ಪ್ರಮುಖ ಯೋಜನೆಗಳು, ಬೆಳೆವಿಮೆಯಿಂದ ಆಗುವ ಅನುಕೂಲ, ಬೆಳೆ ಸಮೀಕ್ಷೆ ಕುರಿತು ಮಾಹಿತಿ ನೀಡಿದರು. ಕೃಷಿ ಅಧಿಕಾರಿ ರಾಘವೇಂದ್ರ ಕೊಂಡಗುರಿ ನಿರೂಪಿಸಿದರು. ಅನೇಕ ರೈತರು, ಕೃಷಿ ಇಲಾಖೆ ಅಧಿಕಾರಿಗಳು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.