ಮಂಗಳವಾರ, 28 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾಗಲದಾಳ: ಹೆಚ್ಚಿದ ಚಿಕುನ್‌ ಗುನ್ಯಾ

Last Updated 27 ನವೆಂಬರ್ 2020, 4:18 IST
ಅಕ್ಷರ ಗಾತ್ರ

ತಾವರಗೇರಾ: ಸಮೀಪದ ಹಾಗಲದಾಳ ಗ್ರಾಮದಲ್ಲಿ ಚಿಕುನ್‌ ಗುನ್ಯಾ ಹೆಚ್ಚಿದ್ದು, ಜಿಲ್ಲಾ ಪಂಚಾಯಿತಿ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷೆ ಭಾಗ್ಯವತಿ ಬೋಲಾ ಗುರುವಾರ ಭೇಟಿ ನೀಡಿದರು.

ಜನರ ಸಮಸ್ಯೆ ಆಲಿಸಿದರು. ನಂತರ ವಿವಿಧ ಇಲಾಖೆಗಳ ಅಧಿಕಾರಿಗಳನ್ನು ದೂರವಾಣಿ ಮೂಲಕ ಸಂಪರ್ಕಿಸಿ, ಗ್ರಾಮದ ಜನರ ಆರೋಗ್ಯ ರಕ್ಷಣೆಗೆ ಜೌಷಧಿ ಕೊರತೆಯಾಗದಂತೆ ನೋಡಿಕೊಳ್ಳಬೇಕು. ಸಾರ್ವಜನಿಕರಿಗೆ ಜಾಗೃತಿ ಮೂಡಿಸಬೇಕು ಎಂದು ಸೂಚಿಸಿದರು.

ತಾತ್ಕಾಲಿಕ ಆಸ್ಪತ್ರೆ ಮತ್ತು ಗ್ರಾಮಕ್ಕೆ ತುರ್ತು ಚಿಕಿತ್ಸೆಗಾಗಿ ಒಂದು ವಿಶೇಷ ಆಂಬುಲೆನ್ಸ್‌ ವ್ಯವಸ್ಥೆ ಮಾಡುವಂತೆ ತಾಲ್ಲೂಕು ವೈಧ್ಯಾಧಿಕಾರಿ ಡಾ.ಆನಂದ ಗೋಟೂರ ಅವರಿಗೆ ತಿಳಿಸಿದರು.

ತಾಲ್ಲೂಕು ಆರೋಗ್ಯಾಧಿಕಾರಿ ಆನಂದ ಗೋಟೂರು, ಮುದೇನೂರು ಆಸ್ಪತ್ರೆಯ ವೈದ್ಯಾಧಿಕಾರಿ ನೀಲಪ್ಪ ಕಟ್ಟಿಮನಿ, ತಾಲ್ಲೂಕು ಮಲೇರಿಯಾ ಅಧಿಕಾರಿ ಪ್ರಕಾಶ, ಹಿರಿಯ ಮತ್ತು ಕಿರಿಯ ಆರೋಗ್ಯ ಸಹಾಯಕರು, ತಾಲ್ಲೂಕು ಪಂಚಾಯಿತಿ ಅಧಿಕಾರಿ ವೆಂಕಟೇಶ, ಜುಮಲಾಪೂರ ಪಿಡಿಒ ಶಂಕರ ಚವ್ಹಾಣ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT