ಬುಧವಾರ, ಮೇ 18, 2022
24 °C
ಬಾಲಕಾರ್ಮಿಕ ಸಮೀಕ್ಷಕರಿಗೆ, ಅಧಿಕಾರಿಗಳಿಗೆ ತರಬೇತಿ

ಮುಖ್ಯವಾಹಿನಿಗೆ ಬಾಲಕಾರ್ಮಿಕರ ತನ್ನಿ: ದೊಡ್ಡಬಸಪ್ಪ ನೀರಲಕೇರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೊಪ್ಪಳ: ‘ಜಿಲ್ಲೆಯಲ್ಲಿ ಬಾಲಕಾರ್ಮಿಕರನ್ನು ಪತ್ತೆ ಮಾಡಿ ಅವರನ್ನು ಮುಖ್ಯವಾಹಿನಿಗೆ ತರಲು ಎಲ್ಲರೂ ಕೈಜೋಡಿಸಬೇಕು’ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ (ಡಿಡಿಪಿಐ) ದೊಡ್ಡಬಸಪ್ಪ ನೀರಲಕೇರಿ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಪೊಲೀಸ್, ಕಾರ್ಮಿಕ, ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಯುನಿಸೆಫ್ ಜಿಲ್ಲಾ ಮಕ್ಕಳ ರಕ್ಷಣಾ ಯೋಜನೆ ಮತ್ತು ಜಿಲ್ಲಾ ಬಾಲಕಾರ್ಮಿಕ ಯೋಜನೆ ಆಶ್ರಯದಲ್ಲಿ ಜಿಲ್ಲಾಡಳಿತ ಭವನದಲ್ಲಿ  ಹಮ್ಮಿಕೊಂಡಿದ್ದ ‘ಬಾಲಕಾರ್ಮಿಕ ಸಮೀಕ್ಷಕರ ಮತ್ತು ಅಧಿಕಾರಿಗಳ ತರಬೇತಿ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಕಾರ್ಮಿಕ ಪದ್ಧತಿಗೆ ಒಳಪಡುವ ಮಕ್ಕಳನ್ನು ಕೆಲಸದಿಂದ ಬಿಡುಗಡೆಗೊಳಿಸುವಲ್ಲಿ ಬಾಲಕಾರ್ಮಿಕ ಇಲಾಖೆ ಒಂದೇ ಸಾಕಾಗುವುದಿಲ್ಲ. ಎಲ್ಲ ಸಂಬಂಧಪಟ್ಟ ಇಲಾಖೆಯವರು ಹಾಗೂ ತಾಲ್ಲೂಕು ಮಟ್ಟದಲ್ಲಿ ಹಾಗೂ ಹೋಬಳಿ ಮಟ್ಟದಲ್ಲಿ ನಿಯೋಜಿಸಿದ ಅಧಿಕಾರಿಗಳು ಸಹ ಪ್ರಯತ್ನ ಮಾಡಿ ಸೂಕ್ತ ಕ್ರಮ ಕೈಗೊಳ್ಳಬೇಕು. ಕೊಪ್ಪಳದಲ್ಲಿ ಬಾಲಕಾರ್ಮಿಕರನ್ನು ಪತ್ತೆ ಮಾಡಿ ಮುಖ್ಯವಾಹಿನಿಗೆ ತರಬೇಕು. ಈ ಕೆಲಸದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಸಹಕಾರ ಯಾವತ್ತು ಇರುತ್ತದೆ ಎಂದು ತಿಳಿಸಿದರು.

ಜಿಲ್ಲಾ ಕಾರ್ಮಿಕ ಅಧಿಕಾರಿ ವೀಣಾ ಮಾಸ್ತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಅಕ್ಕಮಹಾದೇವಿ ಗಿರಡ್ಡಿ ಮಾತನಾಡಿದರು. ನಂತರ ನಡೆದ ತರಬೇತಿ ಕಾರ್ಯಕ್ರಮದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಯೋಜನೆ-ಯೂನಿಸೆಫ್ ಕೊಪ್ಪಳ ಪ್ರಾದೇಶಿಕ ಸಂಯೋಜಕ ರಾಘವೇಂದ್ರ ಭಟ್ ಅವರು ಬಾಲಕಾರ್ಮಿಕ/ ಕಿಶೋರ ಕಾರ್ಮಿಕ ಪದ್ಧತಿ ಕಾಯ್ದೆಯ ಬಗ್ಗೆ ಸವಿಸ್ತಾರವಾದ ಮಾಹಿತಿ ನೀಡಿದರು. ಜಿಲ್ಲಾ ಮಕ್ಕಳ ರಕ್ಷಣಾ ಯೋಜನೆ-ಯುನಿಸೆಫ್ ವ್ಯವಸ್ಥಾಪಕ ಹರೀಶ್ ಜೋಗಿ ಅವರು ಕಾರ್ಯಾಗಾರದಲ್ಲಿ ಭಾಗವಹಿಸಿದ ಎಲ್ಲಾ ಸ್ವಯಂ ಸೇವಾ ಸಂಸ್ಥೆಯವರಿಗೆ ಬಾಲ್ಯಾವಸ್ಥೆ ಹಾಗೂ ಕಿಶೋರ ಕಾರ್ಮಿಕರ ಸಮೀಕ್ಷಾ ನಮೂನೆ ಬಗ್ಗೆ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕ ಬಸವರಾಜ ಹಿರೇಗೌಡ್ರ ಸ್ವಾಗತಿಸಿದರು. ಬಾಲಕಾರ್ಮಿಕ ಸಮೀಕ್ಷಕರು ಮತ್ತು ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು