ಕೊಪ್ಪಳ: ‘ಜಿಲ್ಲೆಯಲ್ಲಿ ಹಿಂದೂ, ಮುಸ್ಲಿಂ ಮತ್ತು ಕ್ರಿಶ್ಚಿಯನ್ ಸೇರಿದಂತೆ ಯಾವುದೇ ಧಾರ್ಮಿಕ ಮಂದಿರಗಳಲ್ಲಿ ಬಾಲ್ಯ ವಿವಾಹ ಜರುಗದಂತೆ ನೋಡಿಕೊಳ್ಳುವುದು ನಮ್ಮ ನಿಮ್ಮೆಲ್ಲರ ಕರ್ತವ್ಯ’ ಎಂದು ಜಿಲ್ಲಾಧಿಕಾರಿ ಡಾ.ಸುರೇಶ ಬಿ.ಇಟ್ನಾಳ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಕ್ಕಳ ರಕ್ಷಣಾ ನಿರ್ದೇಶನಾಲಯ, ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸಂಯುಕ್ತಾಶ್ರಯದಲ್ಲಿ ಮಂಗಳವಾರ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಆಯೋಜಿಸಿದ್ದ ‘ಬಾಲ್ಯವಿವಾಹ ನಿಷೇಧ ಕಾಯ್ದೆ-2006, ಕರ್ನಾಟಕ ತಿದ್ದುಪಡಿ-2016 ಹಾಗೂ ಹದಿಹರೆಯದ ಮಕ್ಕಳ ಸಬಲೀಕರಣ ಕುರಿತು ವಿವಿಧ ಭಾಗೀದಾರರಿಗೆ ಒಂದು ದಿನದ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

‘ಜಿಲ್ಲೆಯಲ್ಲಿ ಈಗಾಗಲೇ ಬಾಲ್ಯವಿವಾಹವನ್ನು ಮಾಡಿಸಿದ ಪಾಸ್ಟರ್(ಪಾದ್ರಿ)ಗೆ ಶಿಕ್ಷೆಯಾಗಿದೆ. ಕಲ್ಯಾಣ ಮಂಟಪಗಳ ಮಾಲೀಕರು, ಸಾಮೂಹಿಕ ವಿವಾಹ ಆಯೋಜಕರ ವಿರುದ್ಧವೂ ಪ್ರಕರಣಗಳು ದಾಖಲಾಗಿವೆ. ಹಾಗಾಗಿ ತಾವುಗಳು ಬಾಲ್ಯವಿವಾಹದಲ್ಲಿ ಭಾಗವಹಿಸಬೇಡಿ ಮತ್ತು ತಮ್ಮ ವ್ಯಾಪ್ತಿಯಲ್ಲಿ ಬಾಲ್ಯವಿವಾಹಗಳಿಗೆ ಅವಕಾಶ ನೀಡಬೇಡಿ’ ಎಂದರು.

‘ಬಾಲ್ಯವಿವಾಹ ಒಂದು ಶಿಕ್ಷಾರ್ಹ ಅಪರಾಧ. ಅದು ಯಾರ ಗಮನಕ್ಕೆ ಬರುತ್ತದೆಯೊ ಅವರು ಅದನ್ನು ತಡೆಗಟ್ಟುವುದು ಆದ್ಯ ಕರ್ತವ್ಯ. ತಪ್ಪಿದಲ್ಲಿ ಸರ್ಕಾರವು ಬಾಲ್ಯವಿವಾಹ ನೆರವೇರಿಸಿದ, ಪ್ರೋತ್ಸಾಹಿಸಿದ ಮತ್ತು ಪಾಲ್ಗೊಂಡವರಿಗೂ ಸಹ 1 ರಿಂದ 2 ವರ್ಷಗಳವರೆಗೆ ಜೈಲು ಶಿಕ್ಷೆ ಜೊತೆಗೆ ₹1ಲಕ್ಷ ದಂಡ ವಿಧಿಸಲಾಗುತ್ತದೆ’ ಎಂದರು.

ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾಂತೇಶ ದರಗದ ಮಾತನಾಡಿ, ‘ಮಕ್ಕಳ ಬಾಲ್ಯವು ಅತ್ಯಮೂಲ್ಯವಾದದ್ದು, 18 ವರ್ಷದೊಳಗಿನ ಮಕ್ಕಳಲ್ಲಿ ದೈಹಿಕ, ಮಾನಸಿಕ, ಸಾಮಾಜಿಕ, ಬೌದ್ಧಿಕ ಹಾಗೂ ಶಾರೀರಿಕ ಬೆಳವಣಿಗೆಯು ತೀವ್ರವಾಗಿರುತ್ತದೆ. ಈ ಸಂದರ್ಭದಲ್ಲಿ ಮಕ್ಕಳು ಅವರ ಹಕ್ಕುಗಳನ್ನು ಅನುಭವಿಸುವಂತಹ ವಾತಾವರಣ ನಿರ್ಮಿಸುವುದು ನಮ್ಮೆಲ್ಲರ ಜವಾಬ್ದಾರಿ. ಅಪ್ರಾಪ್ತ ವಯಸ್ಸಿನಲ್ಲಿ ಮಕ್ಕಳಿಗೆ ವಿವಾಹ ಮಾಡಿದರೆ ಅವರ ಬೆಳವಣಿಗೆಯ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ಅಲ್ಲದೇ ಮಕ್ಕಳ ಮೇಲೆ ದೈಹಿಕ, ಮಾನಸಿಕ ಹಾಗೂ ಲೈಂಗಿಕ ಹಲ್ಲೆಗಳು ಘಟಿಸುತ್ತವೆ. ಸದ್ಯ ಜಾರಿಯಲ್ಲಿರುವ ಕಾನೂನಿನ್ವಯ ಅಪ್ರಾಪ್ತ ವಯಸ್ಸಿನ ಪತ್ನಿಯೊಂದಿಗಿನ ಲೈಂಗಿಕ ಸಂಪರ್ಕವು ಸಹ ಅತ್ಯಾಚಾರವಾಗಿರುತ್ತದೆ. ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆ-2012ರ ಅಡಿಯಲ್ಲಿ ದಾಖಲಾಗಿರುವ ಪ್ರಕರಣಗಳನ್ನು ವಿಶ್ಲೇಷಿಸಲಾಗಿ ಈ ರೀತಿಯ ಪ್ರಕರಣಗಳೇ ಅಧಿಕವಾಗಿವೆ. ಆದ್ದರಿಂದ ಬಾಲ್ಯ ವಿವಾಹಗಳಲ್ಲಿ ಭಾಗವಹಿಸಬೇಡಿ, ಅವಕಾಶವನ್ನು ನೀಡಬೇಡಿ ಮತ್ತು ಕಾಯ್ದೆಯ ಕುರಿತು ಸಮುದಾಯದಲ್ಲಿ ಜಾಗೃತಿ ಮೂಡಿಸಿ’ ಎಂದರು.

ಸಂಪನ್ಮೂಲ ವ್ಯಕ್ತಿ ಯುನಿಸೆಫ್-ಮಕ್ಕಳ ರಕ್ಷಣಾ ಯೋಜನೆಯ ಪ್ರಾದೇಶಿಕ ಸಂಯೋಜಕ ಕೆ.ರಾಘವೇಂದ್ರ ಭಟ್ ಅವರು ಬಾಲ್ಯವಿವಾಹ ನಿಷೇಧ ಕಾಯ್ದೆ-2006 ಕರ್ನಾಟಕ ತಿದ್ದುಪಡಿ-2016ರ ಕುರಿತು ಹಾಗೂ ಯುನಿಸೆಫ್-ಮಕ್ಕಳ ರಕ್ಷಣಾ ಯೋಜನೆಯ ಜಿಲ್ಲಾ ವ್ಯವಸ್ಥಾಪಕ ಹರೀಶ ಜೋಗಿ ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆಯ ಕುರಿತು ತರಬೇತಿ ನೀಡಿದರು.

ಡಿವೈಎಸ್ಪಿ ಮುತ್ತಣ್ಣ ಸವರಗೋಳ, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಪಿ.ವೈ.ಶೆಟ್ಟೆಪ್ಪನವರ್, ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿ ಮಹಾಂತಸ್ವಾಮಿ ಪೂಜಾರ, ಬೆಳಗಾವಿ ಸ್ಪಂದನ ಸೊಸೈಟಿ ಕಾರ್ಯದರ್ಶಿ ಸುಶೀಲಾ ವಿ. ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.