ಗುರುವಾರ , ಫೆಬ್ರವರಿ 27, 2020
19 °C

ಮಕ್ಕಳೇ ದೇಶದ ಆಸ್ತಿ: ರಾಮಣ್ಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕುಕನೂರು: ಮಕ್ಕಳಿಗಾಗಿ ಆಸ್ತಿಯನ್ನು ಮಾಡಬೇಡಿ. ಮಕ್ಕಳನ್ನೇ ಆಸ್ತಿಯನ್ನಾಗಿಸಿ ಎಂದು ಮುಖ್ಯಶಿಕ್ಷಕ ರಾಮಣ್ಣ ತಳವಾರ ಸಲಹೆ ನೀಡಿದರು.

ತಾಲ್ಲೂಕಿನ ಮಸಬಹಂಚಿನಾಳ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ಆಯೋಜಿಸಿದ್ದ ‘ಮಕ್ಕಳ ದಿನಾಚರಣೆ’  ಉದ್ಘಾಟಿಸಿ ಅವರು ಮಾತನಾಡಿದರು. ಮಕ್ಕಳು ಈ ದೇಶದ ಭವಿಷ್ಯ ಮತ್ತು ಆಸ್ತಿ ಎಂದು ಮಾಜಿ ಪ್ರಧಾನಿ ಜವಹಾರಲಾಲ ನೆಹರೂ ಹೇಳಿದ್ದಾರೆ. ಪೋಷಕರು ಮಕ್ಕಳನ್ನು ಪ್ರೋತ್ಸಾಹಿಸಬೇಕು ಎಂದು ನುಡಿದರು

 ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕೊಡಿಸಬೆಕು ಎಂದು ಹೇಳಿದರು. ವಿದ್ಯಾರ್ಥಿಗಳಿಗಾಗಿ ಕೆರೆದಡ, ಮೂಸಿಕಲ್ ಚೇರ್, ಗಾಳಿಯಲ್ಲಿ ಚೆಂಡು, ಬಾಲ್ ಪಾಸಿಂಗ್  ಸ್ಪ‍ರ್ಧೆಗಳನ್ನು ಏರ್ಪಡಿಸಲಾಗಿತ್ತು. ಚಿದಾನಂದ ಪತ್ತಾರ, ಪ್ರಭು ವಕ್ಕಳದ, ಬಸವನಗೌಡ ಪಾಟೀಲ, ಗಫರಸಾಬ್ ನದಾಪ್, ಸಾಧಿಕಾ ಬೇಗಂ, ಕಲ್ಲಪ್ಪ ಕಟಗಿಹಳ್ಳಿ, ನಂದಿನಿಕುಮಾರಿ, ಜಲಜಾಕ್ಷಿ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)