ಮಂಗಳವಾರ, ನವೆಂಬರ್ 24, 2020
21 °C

‘ಮಕ್ಕಳಿಗೆ ಉತ್ತಮ ಸಂಸ್ಕಾರ ಅಗತ್ಯ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಯಲಬುರ್ಗಾ: ‘ಉತ್ತಮ ಸಂಸ್ಕಾರ ಮೈಗೂಡಿಸಿಕೊಂಡು ಮಾದರಿ ವ್ಯಕ್ತಿಗಳಾಗಿ ಬೆಳೆಯಬೇಕು’ ಎಂದು ಬಸವಜ್ಯೋತಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಶಿವಶರಣಪ್ಪ ಬಳಿಗಾರ ಸಲಹೆ ನೀಡಿದರು.

ತಾಲ್ಲೂಕಿನ ಮುಧೋಳ ಗ್ರಾಮದಲ್ಲಿ ಮಕ್ಕಳ ದಿನಾಚರಣೆ ಪ್ರಯುಕ್ತ ಭಾನುವಾರ ನಡೆದ ಓದುವ ಬೆಳಕು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಒಳ್ಳೆಯ ಸಾಧಕರ, ದೇಶಭಕ್ತರ ಜೀವನ ಚರಿತ್ರೆ ಪುಸ್ತಕಗಳನ್ನು ಓದುವ ಮೂಲಕ ಅವರ ವಿಚಾರಗಳನ್ನು ಅಳವಡಿಸಿಕೊಳ್ಳಬೇಕು ಎಂದರು.

ಅಧ್ಯಕ್ಷತೆ ವಹಿಸಿದ್ದ ಗ್ರಾಮ ಹಿತರಕ್ಷಣಾ ಸಮಿತಿಯ ಅಧ್ಯಕ್ಷ ಬಸಪ್ಪ ಅಕ್ಕಿ ಮಾತನಾಡಿ,‘ಓದುವ ಮತ್ತು ಬರೆಯುವ ಹವ್ಯಾಸ ರೂಢಿಸಿಕೊಂಡರೆ ಉಜ್ವಲ ಭವಿಷ್ಯ ರೂಪಗೊಳ್ಳಲು ಸಾಧ್ಯವಾಗುತ್ತದೆ’ ಎಂದು ಹೇಳಿದರು.

ಗಣ್ಯರಾದ ರಾಜು ಪಲ್ಲೇದ, ಸಿದ್ದಪ್ಪ ಡೊಳ್ಳಿನ, ಚನ್ನಸಂಗಪ್ಪ ಶಿಳ್ಳಿನ ಅತಿಥಿಗಳಾಗಿ ಭಾಗವಹಿಸಿದ್ದರು. ಪಿಡಿಒ ಫಕೀರಪ್ಪ ಕಟ್ಟಿಮನಿ ಮಾತನಾಡಿದರು. ಗ್ರಂಥಾಲಯ ಮೇಲ್ವಿಚಾರಕ ಜಗನ್ನಾಥ ಅರ್ಕಸಾಲಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.