ಶನಿವಾರ, ಜನವರಿ 23, 2021
18 °C
ಗಂಗಾವತಿ ನಗರದಲ್ಲಿ ಸೆಂಟರ್‌ ಆಫ್‌ ಇಂಡಿಯನ್‌ ಟ್ರೇಡ್‌ ಯೂನಿಯನ್ಸ್ ಕಾರ್ಯಕರ್ತರಿಂದ ಪ್ರತಿಭಟನೆ

ಕೃಷಿ ಕಾಯ್ದೆಗಳನ್ನು ವಾಪಸ್‌ ಪಡೆಯಿರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಗಂಗಾವತಿ: ಕೇಂದ್ರದ ಮೂರು ಕೃಷಿ ಕಾಯ್ದೆಗಳನ್ನು ರದ್ದುಪಡಿಸಬೇಕು ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ನಗರದ ಶ್ರೀ ಕೃಷ್ಣದೇವರಾಯ ವೃತ್ತದಲ್ಲಿ ಸೆಂಟರ್‌ ಆಫ್‌ ಇಂಡಿಯನ್‌ ಟ್ರೇಡ್‌ ಯೂನಿಯನ್ಸ್ (ಸಿಐಟಿಯು) ಪ್ರತಿಭಟನೆ ನಡೆಸಿತು.

ಸಂಘಟನೆಯ ತಾಲ್ಲೂಕು ಘಟಕದ ಅಧ್ಯಕ್ಷೆ ಲಕ್ಷ್ಮೀದೇವಿ ಮಾತನಾಡಿ,‘ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸಬೇಕು. ಮೂರು ಕೃಷಿ ಕಾನೂನಗಳನ್ನು ವಾಪಸ್‌ ಪಡೆಯಬೇಕು. ವಿದ್ಯುತ್‌ ಮಸೂದೆ ಹಿಂದಕ್ಕೆ ಪಡೆಯಬೇಕು. ಖಾಸಗೀಕರಣ ನಿಲ್ಲಿಸಬೇಕು. ಆದಾಯ ತೆರಿಗೆ ಮಿತಿಗೆ ಒಳಪಡದ ಕುಟುಂಬಗಳಿಗೆ ಮಾಸಿಕ ₹7,500 ನೀಡಬೇಕು’ ಎಂದು ಹೇಳಿದರು.

‘ಪ್ರತಿಯೊಬ್ಬರಿಗೂ ಪ್ರತಿ ತಿಂಗಳು 10 ಕೆ.ಜಿ ಆಹಾರ ಧ್ಯಾನಗಳನ್ನು ಉಚಿತವಾಗಿ ನೀಡಬೇಕು. ಉದ್ಯೋಗ ಖಾತ್ರಿ ಕೆಲಸದ ಅವಧಿಯನ್ನು 200 ದಿನಗಳಿಗೆ ಹೆಚ್ಚಿಸಬೇಕು. ಹೊಸ ಪಿಂಚಣಿ ಯೋಜನೆ ರದ್ದುಗೊಳಿಸಿ, ಹಳೆ ಪಿಂಚಣಿ ಜಾರಿಗೆ ತರಬೇಕು’ ಎಂದು ಆಗ್ರಹಿಸಿದರು.

ಸಂಘಟನೆಯ ಪ್ರಮುಖರಾದ ನಿರುಪಾದಿ ಬೆಣಕಲ್‌, ಸಾವಿತ್ರಿ ಜೋಷಿ, ರೇಣುಕಮ್ಮ, ಕೃಷ್ಣಪ್ಪ ನಾಯಕ, ಬಾಳಪ್ಪ ಹುಲಿಹೈದರ್‌, ನಾಗೇಶ ನಾಯಕ, ದುರುಗಮ್ಮ, ಜಯಶ್ರೀ, ರವಿ, ಬಸವರಾಜ ಹಾಗೂ ಹುಲುಗಪ್ಪ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.