ಕಾರಟಗಿ: ಪಟ್ಟಣದ ಪುರಸಭೆ ಆವರಣದಲ್ಲಿ ಸ್ವಚ್ಚತಾ ಕೆಲಸ ಮಾಡುತ್ತಿರುವ ಪೌರಕಾರ್ಮಿಕರು ನಡೆಸುತ್ತಿರುವ ಅಹೋರಾತ್ರಿ ಧರಣಿ ಸೋಮವಾರ 15ನೇ ದಿನ ಪೂರೈಸಿದೆ. ಪುರಸಭೆ ಜನಪ್ರತಿನಿಧಿಗಳು ಭರವಸೆ ನೀಡಿದರೂ ಧರಣಿ ನಿರತರು ಒಪ್ಪಲಿಲ್ಲ. ‘ಭರವಸೆ ಲಿಖಿತ ರೂಪದಲ್ಲಿ ನೀಡಬೇಕು’ ಎಂದು ಪಟ್ಟು ಹಿಡಿದರು.

10 ವರ್ಷಗಳಿಂದ ಸ್ವಚ್ಚತಾ ಕಾರ್ಮಿಕರಾಗಿ ದುಡಿಯುತ್ತಿರುವ ತಮ್ಮನ್ನು ನೇರ ಪಾವತಿಗೊಳಪಡಿಸಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಕಳೆದ 15 ದಿನಗಳಿಂದ ಅಖಿಲ ಭಾರತ ಕಾರ್ಮಿಕ ಸಂಘಟನೆಗಳ ಕೇಂದ್ರೀಯ ಸಮಿತಿ ನೇತೃತ್ವದಲ್ಲಿ ಧರಣಿ ನಡೆಸುತ್ತಿದ್ದಾರೆ.

ಸಂಘಟನೆಯ ಜಿಲ್ಲಾಧ್ಯಕ್ಷ ವಿಜಯ ದೊರೆರಾಜು, ಸದಸ್ಯ ಸಣ್ಣ ಹನುಮಂತಪ್ಪ ಧರಣಿ ನಿರತರೊಂದಿಗೆ ನಿತ್ಯ ಪಾಲ್ಗೊಂಡು ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ.

ಪೌರಕಾರ್ಮಿಕರ ನ್ಯಾಯಯುತ ಹೋರಾಟಕ್ಕೆ ಸಿಪಿಐಎಂಎಲ್ ಪಕ್ಷದ ರಾಜ್ಯ ಕಾರ್ಯದರ್ಶಿ ಕ್ಲಿಫ್ಟನ್ ಡಿ.ರೊಜಾರಿಯೋ ಆಗಮಿಸಿ ಬೆಂಬಲ ವ್ಯಕ್ತಪಡಿಸಿದರಲ್ಲದೇ, ಪುರಸಭೆ ಆಡಳಿತ ಮಂಡಳಿಯೊಂದಿಗೆ ಚರ್ಚಿಸಿ, ಬೇಡಿಕೆ ಈಡೇರಿಸುವಂತೆ ಆಗ್ರಹಿಸಿದರು.

ಧರಣಿ ನಿರತರ ಬಳಿಗೆ ಪುರಸಭೆ ಅಧ್ಯಕ್ಷೆ ರೇಖಾ ರಾಜಶೇಖರ ಆನೆಹೊಸೂರು, ಸ್ಥಾಯಿ ಸಮಿತಿ ಅಧ್ಯಕ್ಷ ಈಶಪ್ಪ ಇಟ್ಟಂಗಿ, ಸದಸ್ಯರಾದ ಹಿರೇಬಸಪ್ಪ ಸಜ್ಜನ್, ಮೇಗೂರ ಮಂಜುನಾಥ, ದೊಡ್ಡ ಬಸವರಾಜ, ಮುಖಂಡ ರಾಜಶೇಖರ ಅನೆಹೊಸೂರು, ಕಿರಿಯ ಆರೋಗ್ಯ ನಿರೀಕ್ಷಕರಾದ ಅಕ್ಷತಾ ಕಮ್ಮಾರ್, ಮಲ್ಲಮ್ಮ ಅವರನ್ನೊಳಗೊಂಡ ತಂಡ ಆಗಮಿಸಿ ಸಕಾರಾತ್ಮಕ ಭರವಸೆ ನೀಡಿದರು.

ಸಿಪಿಐಎಂಎಲ್ ಲಿಬರೇಷನ್ ರಾಜ್ಯ ಕಾರ್ಯದರ್ಶಿ ಕ್ಲಿಫ್ಟನ್ ಡಿ. ರೊಜಾರಿಯೋ ಮಾತನಾಡಿ, ‘ಸ್ವಚ್ಚತಾ ಕೆಲಸ ಮಾಡುತ್ತಿರುವ ಪೌರಕಾರ್ಮಿಕರಿಗೆ ಅನ್ಯಾಯ ಮಾಡಿದರೆ ಸಹಿಸುವುದಿಲ್ಲ. ಸದ್ಯಕ್ಕೆ ಅವಶ್ಯಕತೆ ಇರುವ 7 ಜನರನ್ನು ತೆಗೆದುಕೊಳ್ಳಬೇಕು. ಬಾಕಿ ವೇತನ ನೀಡಬೇಕು ಹಾಗೂ ಪೌರಾಡಳಿತ ನೀರ್ದೇಶನಾಲಯದ ಸೂಚನೆಗಳಂತೆ 2025ರ ಜನಸಂಖ್ಯೆಗೆ ಅನುಗುಣವಾಗಿ ಇನ್ನೂ ಹೆಚ್ಚಿನ ಕಾರ್ಮಿಕರ ಅವಶ್ಯಕತೆ ಇದೆ ಎಂದು ಜಿಲ್ಲಾಧಿಕಾರಿಗೆ ಮತ್ತು ಸರ್ಕಾರಕ್ಕೆ ಪ್ರಸ್ತಾವನೆ ಕಳಿಸಿದರೆ, ಸಂಬಂಧಿಸಿದ ಅಧಿಕಾರಿಗಳಿಗೆ ನಮ್ಮ ಸಂಘಟನೆ ಒತ್ತಾಯಿಸುವುದು’ ಎಂದರು.

ಎಐಸಿಸಿಟಿಯು ರಾಜ್ಯ ಸಮಿತಿ ಸದಸ್ಯ ನಾಗರಾಜ ಪೂಜಾರ್, ಜಿಲ್ಲಾ ಸದಸ್ಯರಾದ ಸಣ್ಣ ಹನುಮಂತಪ್ಪ ಹುಲಿಹೈದರ್, ಆರ್. ಎಚ್.ಕಲಮುಂಗಿ, ಪೌರಕಾರ್ಮಿಕರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.