ಮಂಗಳವಾರ, ಜುಲೈ 27, 2021
25 °C
ಐಎಎಸ್‌ ಅಧಿಕಾರಿಗಳಿಂದ ಸ್ಪರ್ಧಾಕಾಂಕ್ಷಿಗಳ ಸಂದೇಹ ನಿವಾರಣೆ: ಮೆಚ್ಚುಗೆ

ನಾಗರಿಕ ಸೇವಾ ಪರೀಕ್ಷೆ: ಆನ್‌ಲೈನ್‌ನಲ್ಲಿ ಮಾಹಿತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೊಪ್ಪಳ: ನಾಗರಿಕ ಸೇವಾ ಪರೀಕ್ಷೆಗಳಾದ ಐಎಎಸ್, ಐಪಿಎಸ್, ಕೆಎಎಸ್ ಮುಂತಾದ ಪರೀಕ್ಷೆಗಳ ಕುರಿತಾಗಿ ಮಾಹಿತಿ ನೀಡಲು ಜಿಲ್ಲಾಡಳಿತದ ವತಿಯಿಂದ ಶನಿವಾರ ಯೂಟ್ಯೂಬ್ ಮತ್ತು ಫೇಸ್‌ಬುಕ್ ಲೈವ್ ಮೂಲಕ ಓರಿಯಂಟೇಷನ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಘುನಂದನ್ ಮೂರ್ತಿ, ಐಎಎಸ್ ಪ್ರೊಬೇಷನರಿ ಅಧಿಕಾರಿ ಹೇಮಂತ್ ಎನ್. (2020ನೇ ಬ್ಯಾಚ್) ಅವರು ಪರೀಕ್ಷೆಗಳ ಹಂತಗಳು, ಭಾಷೆ ಹಾಗೂ ಐಚ್ಛಿಕ ವಿಷಯಗಳ ಆಯ್ಕೆ, ಪ್ರಿಲಿಮ್ಸ್ ಹಾಗೂ ಮೇನ್ಸ್ ಪರೀಕ್ಷೆಗಳಿಗೆ ಅಧ್ಯಯನ ನಡೆಸಬೇಕಾದ ವಿಷಯಗಳು, ಪ್ರಕಾರಗಳು, ವ್ಯಕ್ತಿತ್ವ ಪರೀಕ್ಷೆ ಎದುರಿಸುವುದು ಮುಂತಾದ ವಿಷಯಗಳ ಕುರಿತು ತಮ್ಮ ಅನುಭವಗಳ ಸಹಿತ ವಿವರಣೆಗಳನ್ನು ನೀಡಿದರು.

ನಾಗರಿಕ ಸೇವೆಗಳ ಪರೀಕ್ಷೆಗೆ ಬಡತನ, ಆರ್ಥಿಕ ದುರ್ಬಲತೆ ಅಡ್ಡಿಯಲ್ಲ ಎಂದು ತಿಳಿಸುತ್ತ ಆರ್ಥಿಕವಾಗಿ ದುರ್ಬಲವಾಗಿರುವ ವರ್ಗದ ಅಭ್ಯರ್ಥಿಗಳಿಗೆ ಸರ್ಕಾರದಿಂದ ಇರುವ ವಿದ್ಯಾರ್ಥಿ ವೇತನ ಸೌಲಭ್ಯದ ಕುರಿತು ಮಾಹಿತಿ ನೀಡಿದರು.

ಈ ಕಾರ್ಯಕ್ರಮಕ್ಕೆ ಜಿಲ್ಲೆಯಾದ್ಯಂತ 5200ಕ್ಕೂ ಹೆಚ್ಚು ಆಸಕ್ತ ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. ಇಂದಿನ ಕಾರ್ಯಕ್ರಮದಲ್ಲಿ 2000ಕ್ಕೂ ಹೆಚ್ಚು ಅಭ್ಯರ್ಥಿಗಳು ಭಾಗವಹಿಸಿ ನಾಗರಿಕ ಸೇವೆಗಳ ಪರೀಕ್ಷೆಗಳ ಕುರಿತು ಇರುವ ಸಂದೇಹಗಳಿಗೆ ಪ್ರಶ್ನೆಗಳನ್ನು ಕೇಳುವುದರ ಮೂಲಕ ಸಲಹೆಗಳನ್ನು, ಉತ್ತರಗಳನ್ನು ಪಡೆದರು.

ಜಿಲ್ಲಾಡಳಿತದ ಈ ಕಾರ್ಯಕ್ರಮ ಮೆಚ್ಚುಗೆಗೆ ಪಾತ್ರವಾಯಿತು. ಯೂನಿಸೆಫ್‌ನ ಜಿಲ್ಲಾ ಸಂಯೋಜಕ ಹರೀಶ್ ಜೋಗಿ ಅವರು ಕಾರ್ಯಕ್ರಮದಲ್ಲಿ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು