ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಳವಂಡಿ | ಕೆಟ್ಟು ನಿಂತ ನೀರಿನ ಘಟಕ: ಪರದಾಟ

Published 9 ಮೇ 2024, 5:26 IST
Last Updated 9 ಮೇ 2024, 5:26 IST
ಅಕ್ಷರ ಗಾತ್ರ

ಅಳವಂಡಿ: ಇಲ್ಲಿನ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಂಪ್ಲಿ ಗ್ರಾಮದಲ್ಲಿ ಕಳೆದ ಹಲವು ದಿನಗಳಿಂದ ಶುದ್ಧ ಕುಡಿಯುವ ನೀರಿನ ಘಟಕ ಕೆಟ್ಟು ನಿಂತಿದ್ದು, ಇದರಿಂದಾಗಿ ಇಲ್ಲಿನ ಜನರು ಶುದ್ಧ ಕುಡಿಯುವ ನೀರಿಗಾಗಿ ಪರದಾಡುವಂತಾಗಿದೆ.

ಕಂಪ್ಲಿ ಗ್ರಾಮವು ಸುಮಾರು 600ಕ್ಕೂ ಹೆಚ್ಚು ಜನಸಂಖ್ಯೆ ಹೊಂದಿದೆ. ಸುಮಾರು 230 ಮನೆಗಳು ಇವೆ. ಕಳೆದ ಹಲವು ವರ್ಷಗಳ ಹಿಂದೆ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪನೆ ಮಾಡಲಾಗಿತ್ತು. ಆದರೆ ಅದು ಕೆಟ್ಟು ನಿಂತು ಹಲವು ದಿನಗಳಾದರೂ ಸಂಬಂಧ ಪಟ್ಟ ಅಧಿಕಾರಿಗಳು ದುರಸ್ತಿ ಮಾಡಿಸದ ಕಾರಣ ತೊಂದರೆ ಅನುಭವಿಸುವಂತಾಗಿದೆ.

ಸದ್ಯ ಗ್ರಾಮಸ್ಥರು ಕುಡಿಯುವ ನೀರಿಗಾಗಿ ಕೆರೆ ನೀರನ್ನು ಅವಲಂಬಿಸಿದ್ದಾರೆ. ಐದಾರು ಕಿ.ಮೀ ಕ್ರಮಿಸಿ ದೂರದಿಂದ ಕೆರೆ ನೀರು ತರಬೇಕಾಗಿದೆ. ವಾಹನ ಹೊಂದಿದವರು ದೂರದಿಂದ ನೀರು ತರುತ್ತಾರೆ ವಾಹನ ಇಲ್ಲದವರು ಏನು ಮಾಡಬೇಕು ಎಂಬುದು ಗ್ರಾಮಸ್ಥರ ಪ್ರಶ್ನೆಯಾಗಿದೆ.... ! ಗ್ರಾಮದಲ್ಲಿ ಪೊಲೀಸ್ ಠಾಣೆ ಇದೆ. ಇಲ್ಲಿನ ಪೊಲೀಸರು ಹಾಗೂ ಗ್ರಾಮದ ಕೆಲ ಜನರು ಅಳವಂಡಿಗೆ ಹೋಗಿ ಕುಡಿಯುವ ನೀರನ್ನು ತರುತ್ತಾರೆ.

‘ಸಂಬಂಧ ಪಟ್ಟ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಕುಡಿಯುವ ನೀರಿನ ಘಟಕ ಇದರ ನಿರ್ವಹಣೆ ಸರಿಯಾಗಿ ಆಗುತ್ತಿಲ್ಲ’ ಎಂದು ಇಲ್ಲಿನ ಗ್ರಾಮಸ್ಥರು ಹೇಳುತ್ತಾರೆ.

ಶುದ್ಧ ಕುಡಿಯುವ ನೀರಿನ ಘಟಕ ದುರಸ್ತಿ ಮಾಡುವಂತೆ ಹಲವಾರು ಬಾರಿ ಸಂಬಂಧ ಪಟ್ಟ ಅಧಿಕಾರಿಗಳಿಗೆ ತಿಳಿಸಿದರು ಯಾವುದೇ ಪ್ರಯೋಜನವಾಗಿಲ್ಲ. ಬೇರೆ ಕಡೆಯಿಂದ ನೀರು ತರುವುದು ಮಾತ್ರ ತಪ್ಪಿಲ್ಲ ಎಂದು ಕಂಪ್ಲಿ ಗ್ರಾಮಸ್ಥರು ‘ಪ್ರಜಾವಾಣಿ’ಗೆ ತಿಳಿಸಿದರು.

ಕಳೆದ ಹಲವು ದಿನಗಳಿಂದ ಕುಡಿಯುವ ನೀರಿನ ಘಟಕ ಬಂದಾಗಿದೆ. ಕೂಡಲೇ ಅಧಿಕಾರಿಗಳು ಕುಡಿಯುವ ನೀರಿನ ಘಟಕ ದುರಸ್ತಿ ಮಾಡಿಸಬೇಕು.
ಹುಸೇನಸಾಬ ಬೆಳಗಟ್ಟಿ ಕಂಪ್ಲಿ ಗ್ರಾಮಸ್ಥ
ಕಂಪ್ಲಿ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಕೆಟ್ಟಿರುವುದು ಗಮನಕ್ಕೆ ಇದೆ. ಈ ಬಗ್ಗೆ ಮೇಲಧಿಕಾರಿಗಳ ಗಮನಕ್ಕೆ ಕೂಡ ತರಲಾಗಿದೆ. ಶೀಘ್ರದಲ್ಲೇ ದುರಸ್ತಿ ಗೊಳಿಸಲಾಗುವುದು.
ಕೊಟ್ರಪ್ಪ ಅಂಗಡಿ ಪಿಡಿಒ ಗ್ರಾ.ಪಂ ಅಳವಂಡಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT