ಆರೋಗ್ಯ ಕೇಂದ್ರದ ಆವರಣ ಸ್ವಚ್ಛತೆ

ಕಾರಟಗಿ: ‘ಸುತ್ತಮುತ್ತಲಿನ ಪರಿಸರವನ್ನು ರಕ್ಷಿಸಬೇಕು. ಉತ್ತಮ ವಾತಾವರಣ ನಿರ್ಮಾಣಕ್ಕೆ ಮುಂದಾಗಬೇಕು’ ಎಂದು ಬಿಜೆಪಿ ಯುವ ಮೋರ್ಚಾ ಕಾರಟಗಿ ಮಂಡಲ ಅಧ್ಯಕ್ಷ ಪಂಪನಗೌಡ ಜಂತಕಲ್ ಹೇಳಿದರು.
ತಾಲ್ಲೂಕಿನ ಸಿದ್ದಾಪುರದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಚ್ಛತಾ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದರು.
‘ಇದು ಪಕ್ಷದ ಕಾರ್ಯಕ್ರಮವಲ್ಲ. ಎಲ್ಲರೂ ನಮ್ಮೊಂದಿಗೆ ಕೈ ಜೋಡಿಸಬೇಕು’ ಎಂದರು.
ಆವರಣ ಸ್ವಚ್ಛಗೊಳಿಸಲಾಯಿತು.
ಶಕ್ತಿ ಕೇಂದ್ರದ ಅಧ್ಯಕ್ಷ ಮಂಜುನಾಥ ಎಂ.ಪಿ, ವಿನಯ್ ಭಾವಿ, ನೆಕ್ಕಂಟಿ ಚಿನ್ನು, ಶಶಿ ಮ್ಯಾದರ್, ವೆಂಕಟೇಶ, ರಾಹುಲ್ ಪವಾರ್, ಮುದಕನಗೌಡ ಹಾಗೂ ಹಾಲನಗೌಡ ಸಿದ್ದಾಪುರ ಇದ್ದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.