ಸೋಮವಾರ, ಸೆಪ್ಟೆಂಬರ್ 27, 2021
24 °C

‘ಪಾದಚಾರಿ ಮಾರ್ಗ ಒತ್ತುವರಿ ತೆರವು ಇಂದಿನಿಂದ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಗಂಗಾವತಿ: ‘ನಗರದ ವಿವಿಧ ರಸ್ತೆಗಳಲ್ಲಿ ಬುಧವಾರ (ಆ.11) ಬೆಳಿಗ್ಗೆ ಪಾದಚಾರಿ ಮಾರ್ಗ ಒತ್ತುವರಿ ತೆರವು ಮಾಡಲಾಗುವುದು’ ಎಂದು ನಗರಸಭೆ ಪೌರಾಯುಕ್ತ ಅರವಿಂದ ಜಮಖಂಡಿ ತಿಳಿಸಿದ್ದಾರೆ.

ಬೀದಿಬದಿ ವ್ಯಾಪಾರಿಗಳು ನಗರದ ಗುಂಡಮ್ಮ ಕ್ಯಾಂಪ್‌ನ ಸಿ.ಟಿ. ಮಾರುಕಟ್ಟೆ ಆವರಣಕ್ಕೆ ಸ್ಥಳಾಂತರಗೊಳ್ಳಬೇಕು ಎಂದು ಆದೇಶ ಹೊರಡಿಸಲಾಗಿತ್ತು. 10 ದಿನಗಳ ಗಡುವು ನೀಡಲಾಗಿತ್ತು. ಆದರೂ ಪ್ರಯೋಜನವಾಗಿಲ್ಲ. ಪಾದಚಾರಿ ಮಾರ್ಗಗಳ ಮೇಲೆಯೇ ವ್ಯಾಪಾರ ಮಾಡುತ್ತಿದ್ದಾರೆ ಎಂದು ಇಲ್ಲಿ ಸುದ್ದಿಗಾರರಿಗೆ ಹೇಳಿದರು.

ಇದರಿಂದ ಸಾರ್ವಜನಿಕ ಸಂಚಾರಕ್ಕೆ ಅಡಚಣೆಯಾಗಿದೆ. ಸಾಕಷ್ಟು ಅಪಘಾತಗಳು ಸಹ ಸಂಭವಿಸಿವೆ ಎಂದರು.

ಆದ್ದರಿಂದ ಬಿಗಿ ಬಂದೋಬಸ್ತ್‌ನಲ್ಲಿ ಒತ್ತುವರಿ ತೆರವು ಕಾರ್ಯಚರಣೆ ನಡೆಸಲಾಗುತ್ತದೆ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು