ಕೊಪ್ಪಳ: ಜಿಲ್ಲೆಯ ಯಲಬುರ್ಗಾದಲ್ಲಿ ಬುಧವಾರ ಬೆಳಿಗ್ಗೆ 11 ಗಂಟೆಗೆ ಆಯೋಜನೆಯಾಗಿರುವ ಮುಖ್ಯಮಂತ್ರಿ ಕಾರ್ಯಕ್ರಮ ನಿಗದಿಯಂತೆ ನಡೆಯಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವ, ಕ್ಷೇತ್ರದ ಶಾಸಕ ಹಾಲಪ್ಪ ಆಚಾರ್ ತಿಳಿಸಿದರು.
ಕೃಷ್ಣ ಬಿ ಸ್ಕೀಂ ಯೋಜನೆಯಡಿ ಕೆರೆಗಳಿಗೆ ನೀರು ತುಂಬಿಸುವ ಕಾರ್ಯಕ್ರಮದ ಉದ್ಘಾಟನೆಗೆ ಸಿಎಂ ಬರಲಿದ್ದಾರೆ. 11.30ಕ್ಕೆ ಚುನಾವಣೆ ಆಯೋಗದ ಪತ್ರಿಕಾಗೋಷ್ಠಿ ಇದೆ. ನಮ್ಮ ಕಾರ್ಯಕ್ರಮ 11ಕ್ಕೆ ನಿಗದಿಯಾಗಿದೆ. ನಿಗದಿತ ಸಮಯಕ್ಕೆ ಕಾರ್ಯಕ್ರಮ ಆರಂಭವಾಗಲಿದೆ ಎಂದು ತಿಳಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.