ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೃಷಿ ಸಂಜೀವಿನಿ ವಾಹನಕ್ಕೆ ಚಾಲನೆ

‘ಸ್ವಾಭಿಮಾನಿ ರೈತ’ ಕಾರ್ಡ್ ವಿತರಿಸಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ
Last Updated 9 ಜನವರಿ 2021, 16:05 IST
ಅಕ್ಷರ ಗಾತ್ರ

ಕೊಪ್ಪಳ: ಸಂಚಾರಿ ಸಸ್ಯ ಆರೋಗ್ಯ ಚಿಕಿತ್ಸಾಲಯ (ಕೃಷಿ ಸಂಜೀವಿನಿ) ವಾಹನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಶನಿವಾರ ಹಸಿರು ನಿಶಾನೆ ತೋರಿಸಿದರು.

ಜಿಲ್ಲೆಯ ಕುಕನೂರು ತಾಲ್ಲೂಕಿನ ಭಾನಾಪುರ ಗ್ರಾಮದ ಕೊಪ್ಪಳ ಆಟಿಕೆಗಳ ಕ್ಲಸ್ಟರ್ ಭೂಮಿಪೂಜೆ ಸಮಾರಂಭದ ವೇದಿಕೆ ಪಕ್ಕದಲ್ಲಿ 20 ಕೃಷಿ ಸಂಜೀವಿನಿ ವಾಹನಗಳಿಗೆ ಚಾಲನೆ ನೀಡಿದರು. ‘ಸ್ವಾಭಿಮಾನಿ ರೈತ’ ಗುರುತಿನ ಚೀಟಿ ವಿತರಿಸಿದರು.

ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ ಪಾಟೀಲ್ ಕೃಷಿ ಪರೀಕ್ಷಾ ಉಪಕರಣಗಳಿಗೆ ಚಾಲನೆ ನೀಡಿ ಮಾತನಾಡಿ,‘ಕೃಷಿ ಉತ್ಪಾದನೆ ಅತಿವೃಷ್ಟಿ ಹಾಗೂ ಅನಾವೃಷ್ಟಿ, ಚಂಡಮಾರುತ, ರೋಗಬಾಧೆ, ಮಣ್ಣಿನ ಫಲವತ್ತತೆ ಅವಲಂಬಿಸಿರುತ್ತದೆ. ಸುಧಾರಿತ ಕೃಷಿ ಉತ್ಪಾದನೆಯನ್ನು ಹೆಚ್ಚಿಸಲು ರೈತ ಸಂಜೀವಿನಿ ವಾಹನದ ಪ್ರಯೋಗಾಲಯಗಳು ನೆರವಾಗಲಿವೆ’ ಎಂದು ಹೇಳಿದರು.

ಯಲಬುರ್ಗಾ ಶಾಸಕ ಹಾಲಪ್ಪ ಆಚಾರ್ ಅಧ್ಯಕ್ಷತೆ ವಹಿಸಿದ್ದರು. ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಸಾರ್ವಜನಿಕ ಉದ್ಯಮೆಗಳ ಸಚಿವ ಜಗದೀಶ ಶೆಟ್ಟರ್, ಗಣಿ ಮತ್ತು ಭೂವಿಜ್ಞಾನ ಸಚಿವ ಸಿ.ಸಿ.ಪಾಟೀಲ್, ಅರಣ್ಯ, ಜೀವಿ ಪರಿಸ್ಥಿತಿ ಹಾಗೂ ಪರಿಸರ ಸಚಿವ ಆನಂದ ಸಿಂಗ್, ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಕೆ.ರಾಜಶೇಖರ್ ಹಿಟ್ನಾಳ, ಸಂಸದ ಕರಡಿ ಸಂಗಣ್ಣ, ಶಾಸಕರಾದ ಅಮರೇಗೌಡ ಬಯ್ಯಾಪುರ, ಪರಣ್ಣ ಈಶ್ವರಪ್ಪ ಮುನವಳ್ಳಿ, ಕೆ.ರಾಘವೇಂದ್ರ ಹಿಟ್ನಾಳ್‌ ಹಾಗೂ ಬಸವರಾಜ ದಢೇಸೂಗೂರು, ವಿಧಾನ ಪರಿಷತ್ ಸದಸ್ಯ ಶಶೀಲ್ ಜಿ.ನಮೋಶಿ, ಮುನಿರಾಬಾದ್ ಕಾಡಾ ಅಧ್ಯಕ್ಷ ತಿಪ್ಪೇರುದ್ರಸ್ವಾಮಿ, ಜಿ.ಪಂ. ಉಪಾಧ್ಯಕ್ಷೆ ಬೀನಾ ಗೌಸ್, ಕುಕನೂರು ತಾಲ್ಲೂಕು ಪಂಚಾಯಿತಿಅಧ್ಯಕ್ಷ ಜಗನ್ನಾಥಗೌಡ ಪಾಟೀಲಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT