ಭಾನುವಾರ, 26 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್‌ನಲ್ಲಿ ನಾಯಕರಿಲ್ಲ ಎಂದು ‌ಮೋದಿ ಹಸಿ ಸುಳ್ಳು ಹೇಳುತ್ತಿದ್ದಾರೆ: ಸಿಎಂ

Published 29 ಏಪ್ರಿಲ್ 2024, 13:14 IST
Last Updated 29 ಏಪ್ರಿಲ್ 2024, 13:14 IST
ಅಕ್ಷರ ಗಾತ್ರ

ಕುಷ್ಟಗಿ (ಕೊಪ್ಪಳ ಜಿಲ್ಲೆ): ಹಿಂದಿನ ಹತ್ತು ವರ್ಷಗಳಲ್ಲಿ ಸಾಕಷ್ಟು ‌ಸುಳ್ಳುಗಳನ್ನು ಹೇಳಿ ಜನರನ್ನು ಯಾಮಾರಿಸಿರುವ ಪ್ರಧಾನಿ‌ ನರೇಂದ್ರ ಮೋದಿ ಈಗ ಕಾಂಗ್ರೆಸ್ ಪಕ್ಷದಲ್ಲಿ ನಾಯಕರಿಲ್ಲ ಎನ್ನುವ ಮತ್ತೊಂದು ಹಸಿ ಸುಳ್ಳು ಹೇಳುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದರು.

ಕುಷ್ಟಗಿಯಲ್ಲಿ ಸೋಮವಾರ ನಡೆದ ಪ್ರಜಾಧ್ವನಿ ಲೋಕಸಭಾ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮಲ್ಲಿಕಾರ್ಜುನ ‌ಖರ್ಗೆ, ರಾಹುಲ್ ಗಾಂಧಿ ಅವರಂಥ ಅನೇಕ ಘಟಾನುಘಟಿ ನಾಯಕರು ‌ನಮ್ಮಲ್ಲಿದ್ದಾರೆ. ಐಎನ್‌ಡಿಐಎ ಒಕ್ಕೂಟ ಅಧಿಕಾರಕ್ಕೆ ಬಂದರೆ ವರ್ಷಕ್ಕೊಮ್ಮೆ ಪ್ರಧಾನಿ ಬದಲಾಗುತ್ತಾರೆ ಎನ್ನುವ ಹಸಿ ಸುಳ್ಳು ಮೋದಿ ಹೇಳುತ್ತಿದ್ದಾರೆ ಎಂದು ಟೀಕಿಸಿದರು.

ರಾಜ್ಯದಲ್ಲಿ 2008ರಿಂದ 2013ರ ಅವಧಿಯಲ್ಲಿ ಆಡಳಿತ ನಡೆಸಿದ ಬಿಜೆಪಿ ಸರ್ಕಾರ ಮೂರು ಜನ ಮುಖ್ಯಮಂತ್ರಿಗಳನ್ನು ಬದಲಿಸಿತು. ನಂತರ ನಾನೇ ‌ಸಿ.ಎಂ. ಆಗಿ ಒಬ್ಬನೇ ಪೂರ್ಣ ಐದು ವರ್ಷ ಆಡಳಿತ ನಡೆಸಿದ್ದೇನೆ. ಆರು ದಶಕಗಳ ಕಾಲ ಆಡಳಿತ ಮಾಡಿದ ಕಾಂಗ್ರೆಸ್ ಪಕ್ಷಕ್ಕೆ ನಾಯಕತ್ವ ಕೊರತೆಯ ದುರ್ಗತಿ ಬಂದಿಲ್ಲ. ನಮ್ಮಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ನಾಯಕರಿದ್ದಾರೆ. ಬಿಜೆಪಿ ಸುಳ್ಳು ಸೃಷ್ಟಿ ಮಾಡುತ್ತಿರುವ ಕಾರ್ಖಾನೆಯಾಗಿದ್ದು ಸುಳ್ಳೆ ಅವರ ಮನೆ ದೇವರು ಎಂದು ಹರಿಹಾಯ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT