ಕೊಪ್ಪಳ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆ. 6ರಂದು ಜಿಲ್ಲಾಕೇಂದ್ರಕ್ಕೆ ಭೇಟಿ ನೀಡಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದು, ಸಂಚಾರ ಸುವ್ಯವಸ್ಥೆ ಕಾಪಾಡಲು ನಿಟ್ಟಿನಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್. ಅರಸಿದ್ಧಿ ಅವರು ಮಂಗಳವಾರ ಅಧಿಕಾರಿಗಳ ಜೊತೆ ಸಭೆ ನಡೆಸಿದರು.

‘ಕಾರ್ಯಕ್ರಮಕ್ಕೆ ಹೆಚ್ಚು ಜನ ಸೇರುವುದರಿಂದ ಕಾನೂನು ಸುವ್ಯವಸ್ಥೆ ಹಾಗೂ ಸಂಚಾರ ದಟ್ಟಣೆ ನಿರ್ವಹಣೆಯಲ್ಲಿ ಯಾವುದೇ ಸಮಸ್ಯೆಗಳಾಗದಂತೆ ಪೊಲೀಸ್ ಅಧಿಕಾರಿಗಳು ಮುಂಜಾಗ್ರತೆ ಕ್ರಮ ವಹಿಸಬೇಕು. ಅಧಿಕಾರಿಗಳಿಗೆ ನೀಡಿದ ಕೆಲಸವನ್ನು ಮುಂದೆ ನಿಂತು ಜವಾಬ್ದಾರಿಯಿಂದ ಮಾಡಬೇಕು. ನಮ್ಮ ಪೊಲೀಸ್ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿ ಸೇರಿದಂತೆ ಇತರೆ ಬೇರೆ ಜಿಲ್ಲೆಗಳಿಂದ 2,500 ಪೊಲೀಸ್ ಸಿಬ್ಬಂದಿ ಬರುತ್ತಾರೆ. ಅವರಿಗೆ ಉಳಿದುಕೊಳ್ಳಲು ಸಮುದಾಯ ಭವನ ಮತ್ತು ಕಲ್ಯಾಣ ಮಂಟಪಗಳಲ್ಲಿ ವ್ಯವಸ್ಥೆ ಮಾಡಬೇಕು’ ಎಂದು ಸೂಚಿಸಿದರು.

‘ಕೊಪ್ಪಳ ಕೇಂದ್ರೀಯ ಬಸ್ ನಿಲ್ದಾಣದಿಂದ ಕಾರ್ಯಕ್ರಮದ ಮುಖ್ಯ ವೇದಿಕೆವರೆಗಿನ ರಸ್ತೆಯ ಪಕ್ಕದಲ್ಲಿ ಸಾರ್ವಜನಿಕರು ವಾಹನಗಳ ನಿಲುಗಡೆಗೆ ಅವಕಾಶ ಕೊಡಬಾರದು. ಅಧಿಕಾರಿಗಳ ವಾಹನಗಳಿದ್ದರೆ ಪಾಸ್ಗಳನ್ನು ಪಡೆಯಬೇಕು. ಜೆಸ್ಕಾಂ, ನಗರಸಭೆ, ಪೊಲೀಸ್ ಸೇರಿದಂತೆ ಇತರೆ ವಿವಿಧ ಇಲಾಖೆಯ ಅಧಿಕಾರಿಗಳು ತಮ್ಮ ಕರ್ತವ್ಯಕ್ಕೆ ಯಾವುದೇ ಸಮಸ್ಯೆಗಳಾಗದಂತೆ ನೋಡಿಕೊಳ್ಳಬೇಕು’ ಎಂದರು.

ಸಹಾಯಕ ಆಯುಕ್ತ ಕ್ಯಾಪ್ಟನ್ ಮಹೇಶ್ ಮಾಲಗಿತ್ತಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಹೇಮಂತಕುಮಾರ್, ಡಿವೈಎಸ್ಪಿಗಳಾದ ಮುತ್ತಣ್ಣ ಸವರಗೋಳ, ಸಿದ್ದಲಿಂಗಪ್ಪಗೌಡ ಪಾಟೀಲ್, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಂಜುನಾಥ ಗುಂಡೂರ, ಕಿಮ್ಸ್ ನಿರ್ದೇಶಕ ವಿಜಯನಾಥ ಇಟಗಿ, ಜಿಲ್ಲಾ ವಾರ್ತಾಧಿಕಾರಿ ಸುರೇಶ ಜಿ., ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ನಾಗರಾಜ ಜುಮ್ಮನ್ನವರ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.