ಕೊಪ್ಪಳ: ರಸ್ತೆ, ಕುಡಿಯುವ ನೀರು, ಚರಂಡಿ ಸೇರಿದಂತೆ ಭಾಗ್ಯನಗರ ಪಟ್ಟಣ ಪಂಚಾಯತಿಗೆ ಮೂಲಸೌಕರ್ಯ ಕಲ್ಪಿಸಲು ಬದ್ಧ ಎಂದು ಶಾಸಕ ರಾಘವೇಂದ್ರ ಹಿಟ್ನಾಳ ಹೇಳಿದರು.

ಭಾಗ್ಯನಗರದಲ್ಲಿ ಓಜನಹಳ್ಳಿ ಕ್ರಾಸ್ನಿಂದ ಗಣೇಶನಗರದವರೆಗೆ ನಿರ್ಮಿಸುತ್ತಿರುವ ರಸ್ತೆ ಕಾಮಗಾರಿಯನ್ನು ಶುಕ್ರವಾರ ವೀಕ್ಷಿಸಿ ಮಾತನಾಡಿದ ಅವರು ‘ಭಾಗ್ಯನಗರದಲ್ಲಿ ₹5 ಕೋಟಿ ವೆಚ್ಚದಲ್ಲಿ ರಸ್ತೆ ನಿರ್ಮಿಸಲಾಗುತ್ತಿದೆ. ಈಗಾಗಲೇ ₹4 ಕೋಟಿ ಬಿಡುಗಡೆಯಾಗಿದ್ದು, ಶೀಘ್ರವೇ ಉಳಿದ ಅನುದಾನ ಒದಗಿಸುವೆ. 821 ಮೀಟರ್ ಉದ್ದದ ರಸ್ತೆ ನಿರ್ಮಾಣವಾಗಲಿದೆ. ಎರಡು ಕಡೆಗಳಲ್ಲಿ ಚರಂಡಿ ನಿರ್ಮಿಸಲಾಗುವುದು’ ಎಂದು ತಿಳಿಸಿದರು.

ಸ್ವಾಮಿ ವಿವೇಕಾನಂದ ಶಾಲೆಯಿಂದ ಸಂಪರ್ಕ ಕಲ್ಪಿಸುವ ಈ ರಸ್ತೆಗೆ ರೈಲ್ವೆ ಕೆಳಸೇತುವೆ ನಿರ್ಮಿಸಬೇಕಿದೆ. ಈ ಸಂಬಂಧ ಸಂಸದ ರಾಜಶೇಖರ ಹಿಟ್ನಾಳ ಜೊತೆ ಚರ್ಚಿಸಿ ಕಿನ್ನಾಳ ರಸ್ತೆಯಲ್ಲಿರುವ ಇರುವಂತೆ ಕೆಳ ಸೇತುವೆ ನಿರ್ಮಿಸಬೇಕಿದೆ ಎಂದರು.

ಭಾಗ್ಯನಗರ ಪಟ್ಟಣ ಪಂಚಾಯತ್ ಅಧ್ಯಕ್ಷ ರಮೇಶ್ ಹ್ಯಾಟಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರಸನ್ನ ಗಡಾದ್, ಪಟ್ಟಣ ಪಂಚಾಯತ್ ಸದಸ್ಯರಾದ ಜಗದೀಶ್ ಮಾಲಗಿತ್ತಿ, ಗವಿಸಿದ್ದಪ್ಪ ಮಗಿಮಾವಿನಹಳ್ಳಿ, ಪ್ರಾಧಿಕಾರದ ಮಾಜಿ ಅಧ್ಯಕ್ಷ ಶ್ರೀನಿವಾಸ್ ಗುಪ್ತಾ, ಮುಖಂಡ ಎಸ್.ಬಿ.ನಾಗರಳ್ಳಿ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೃಷ್ಣ ಇಟ್ಟಂಗಿ, ನಗರಸಭೆ ಪೌರಾಯುಕ್ತ ವೆಂಕಟೇಶ ನಾಗನೂರು, ಪುರಸಭೆ ಮುಖ್ಯಾಧಿಕಾರಿ ಸುರೇಶ ಬಬಲಾದ, ಪ್ರಾಧಿಕಾರದ ಆಯುಕ್ತ ಶರಣಪ್ಪ ನಾಯಕ್ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.